ಕಲ್ಪ ಮೀಡಿಯಾ ಹೌಸ್ | ವಿಜಯನಗರ |
ಜಿಲ್ಲೆಯ ಹಂಪಿಯ ಶ್ರೀ ವಿರುಪಾಕ್ಷೇಶ್ವರ ದೇವಸ್ಥಾನದ ಆವರಣದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಶ್ರೀ ಪುರಂದರದಾಸರ ಆರಾಧನೋತ್ಸವ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲೆಯ ಉಸ್ತುವಾರಿ ಹಾಗೂ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಜಿ ಯವರು ಉದ್ಘಾಟಿಸಿ, ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕ ಸಂಗೀತದ ಪಿತಾಮಹ, ಹರಿದಾಸ ಸಾಹಿತ್ಯದ ಮೂಲಕ ಜೀವನದ ಸತ್ಯಗಳನ್ನು ಜನರಿಗೆ ತಿಳಿಸಿದ ಮಹಾನ್ ಸಂತ, ದಾರ್ಶನಿಕ ಪುರಂದರದಾಸರ ಆರಾಧನೋತ್ಸವವನ್ನು ಈ ಪುಣ್ಯ ನೆಲದಲ್ಲಿ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ ಎಂದರು.
ಇಂತಹ ಕಾರ್ಯಕ್ರಮದ ಮೂಲಕ ವಿಜಯನಗರದ ಪರಂಪರೆಯನ್ನು ತಿಳಿಸುವ ಕಾರ್ಯ ಮಾಡುತ್ತಿರುವುದು ಮೆಚ್ಚುಗೆಯ ಸಂಗತಿ. ಬಳಿಕ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ, ಮಕ್ಕಳ ಕಲಾವೈಭವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನಿರುದ್ದ ಶ್ರವಣ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಲ್, ಪೊಲೀಸ್ ವರಿಷ್ಠಾಧಿಕಾರಿ ಅರುಣ್, ಗಣ್ಯರು, ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post