ಕಲ್ಪ ಮೀಡಿಯಾ ಹೌಸ್ | ವಿಜಯನಗರ |
ಮಾಜಿ ಸಿಎಂ ಯಡಿಯೂರಪ್ಪ B S Yadiyurappa ಅವರ ವಿರುದ್ಧ ಹಗುರವಾಗಿ ಮಾತನಾಡಿದ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್’ಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಅವಧಿಯಲ್ಲಿ ಕೈಗೊಂಡ ಜನಪರ ಕಾರ್ಯಗಳಿಂದಾಗಿ ಜನರ ಹೃದಯ ಸಿಂಹಾಸನದಲ್ಲಿ ನೆಲೆಸಿದ್ದಾರೆ. ಅಂತಹವರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುತ್ತಿದ್ದಾರೆ. ಇವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಇಡಿಯ ವಿಶ್ವವೇ ಕೋವಿಡ್’ನಿಂದ ತತ್ತರಿಸಿದ ವೇಳೆ ನಮ್ಮ ದೇಶದಲ್ಲಿ ಸೋಂಕು ಕಡಿಮೆ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಕ್ರಮ ಪ್ರಪಂಚಕ್ಕೇ ಮಾದರಿಯಾಗಿದೆ. ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಆರ್ಥಿಕ ಹಿಂಜರಿತವಿದ್ದರೂ ಭಾರತದ ಆರ್ಥಿಕತೆ ಮಾತ್ರ ಸುಭದ್ರವಾಗಿದೆ ಎಂದು ಐಎಂಎಫ್ ವರದಿ ನೀಡಿದೆ. ಆದರೆ, ವಾಸ್ತವವನ್ನು ಅರಿಯದೇ ಕಾಂಗ್ರೆಸ್ಸಿಗರು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಕಿಡಿ ಕಾರಿದರು.
Also read: ಗೋಕಟ್ಟೆ ನಿರ್ಮಾಣ ಕಾಮಗಾರಿಗೆ ಅಡ್ಡಿ ಹಿನ್ನೆಲೆ ಇಒ ತುರ್ತು ಸಭೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post