ಕಲ್ಪ ಮೀಡಿಯಾ ಹೌಸ್ | ವಿಜಯನಗರ |
ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
ಬಸಮ್ಮ ಅಲಿಯಾಸ್ ರೂಪಾ (34) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಇವರು ಹಡಗಲಿಯ ನ್ಯಾಷನಲ್ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತಿ ಅರ್ಜುನ್ ಪರಶೆಟ್ಟಿ ಕೂಡ ಅದೇ ಶಾಲಾಯಲ್ಲಿ ಶಿಕ್ಷಕನಾಗಿದ್ದ. ರೂಪಾ ಮತ್ತು ಅರ್ಜುನ್ ಪರಸ್ಪರ ಪ್ರೀತಿಸಿ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ರೂಪಾ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನ್ಯಾಷನಲ್ ಶಾಲೆ ಅರ್ಜುನ್ ಕುಟುಂಬದ ಒಡೆತನಕ್ಕೆ ಸೇರಿದ್ದಾಗಿದ್ದು, ಗಂಡ-ಹೆಂಡತಿ ಇಬ್ಬರೂ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಭಾನುವಾರ ಪರೀಕ್ಷೆ ಕೆಲಸದ ನೆಪದಲ್ಲಿ ಶಾಲೆಗೆ ಬಂದು ಡೆತ್‌ನೋಟ್ ಬರೆದಿಟ್ಟು ರೂಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post