ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದ 31ನೆಯ ಜಿಲ್ಲೆಯಾಗಿ ವಿಜಯನಗರ ಇಂದು ಅಧಿಕೃತವಾಗಿ ಅಸ್ಥಿತ್ವಕ್ಕೆ ಬಂದಿದೆ.
ಈ ಕುರಿತಂತೆ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ರಚಿಸಿದ್ದ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಐದು ನೂತನ ವಿಜಯನಗರ ಜಿಲ್ಲೆಯಲ್ಲಿ ಆರು ತಾಲೂಕುಗಳಿರಲಿದೆ. ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾ ಕೇಂದ್ರವಾಗಿದ್ದು ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ, ಹರಪನಹಳ್ಳಿ ತಾಲೂಕುಗಳು ಈ ಜಿಲ್ಲೆಯ ವ್ಯಾಪ್ತಿಗೆ ಬರಲಿದೆ.
ಇನ್ನು ಬಳ್ಳಾರಿ, ಸಿರಗುಪ್ಪ, ಕುರಗೋಡು, ಸಂಡೂರು ಮತ್ತು ಕಂಪ್ಲಿ ತಾಲೂಕುಗಳು ಬಳ್ಳಾರಿ ಜಿಲ್ಲೆಗೆ ಸೇರಿರಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post