ಕಲ್ಪ ಮೀಡಿಯಾ ಹೌಸ್ | ವಿಜಯಪುರ |
ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ಕರೆದೊಯ್ಯುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಕ್ರಾಸ್ ಬಳಿ ನಡೆದಿದೆ.
ಮುದ್ದೇಬಿಹಾಳದ ಸರ್ಕಾರಿ ಮತ್ತು ಖಾಸಗಿ ಅನುದಾನಿತ ನೌಕರರನ್ನು ಸಿಂದಗಿ ವಿಧಾನಸಭಾ ಮತಕ್ಷೇತ್ರದ ತರಬೇತಿಗೆ ನಿಯೋಜಿಸಿದ್ದರಿಂದ ಅವರನ್ನು ಬಸ್ ಮೂಲಕ ಸಿಂದಗಿಗೆ ಕರೆದೊಯ್ಯುವಾಗ ವಿಜಯಪುರ ಮುಖ್ಯ ರಸ್ತೆ ಪಕ್ಕದ ತಗ್ಗಿನಲ್ಲಿ ಬಸ್ ಪಲ್ಟಿಯಾಗಿದೆ. ಹಿಂದಿನ ಬಸ್ಸಿನಲ್ಲಿದ್ದವರು ಗಾಯಾಳುಗಳ ನೆರವಿಗೆ ಧಾವಿಸಿದ್ದು, ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಕರೆದೊಯ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಕೇದರನಾಥಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳು ಮುಂಜಾಗ್ರತೆ ವಹಿಸಿ: ಹವಾಮಾನ ಇಲಾಖೆ ಎಚ್ಚರಿಕೆ
ಚುನಾವಣಾಧಿಕಾರಿ ಚಂದ್ರಕಾಂತ ಪವಾರ, ತಹಶೀಲ್ದಾರ ರೇಖಾ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post