ಕಲ್ಪ ಮೀಡಿಯಾ ಹೌಸ್ | ವಿಜಯಪುರ |
ಆಕಸ್ಮಿಕವಾಗಿ ಕೊಳವೆ ಬಾವಿಗೆ #Borewell ಬಿದ್ದು ಕಳೆದ 18 ಗಂಟೆಗಳಿಂದ ನರಳಾಟ ಅನುಭವಿಸಿದ್ದ 2 ವರ್ಷದ ಕೂಸನ್ನು ಜೀವಂತ ರಕ್ಷಣೆ ಮಾಡುವಲ್ಲಿ ಎನ್’ಡಿಆರ್’ಎಫ್ #NDRF ಸಿಬ್ಬಂದಿ ಯಶಸ್ವಿಯಾಗಿದ್ದು, ಇಡೀ ಗ್ರಾಮ ಸಂಭ್ರಮದಲ್ಲಿ ಮುಳುಗಿದೆ.
ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಬುಧವಾರ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು ಸಾತ್ವಿಕ್ ಮುಜಗೊಂಡ ರಕ್ಷಣಾ ಕಾರ್ಯಾಚರಣೆ ಮುಗಿದಿದೆ.
18 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಎನ್’ಡಿಆರ್’ಎಫ್, ಎಸ್’ಡಿಆರ್’ಎಫ್ ತಂಡವು ಮಗುವನ್ನು ಜೀವಂತವಾಗಿ ಹೊರತೆಗೆದಿದೆ. ಬುಧವಾರ ಸಂಜೆ 6 ಗಂಟೆಗೆ ಕೊಳವೆ ಬಾವಿಗೆ ಬಿದ್ದ ಮಗು 18 ಗಂಟೆಗಳಿಂದ ಅನ್ನ ನೀರು ಇಲ್ಲದೆ ಜೀವನ್ಮರಣ ಹೋರಾಟ ನಡೆಸುತ್ತಿತ್ತು.
ಮಗುವನ್ನು ಹೊರ ತೆಗೆದ ತಕ್ಷಣ ಪ್ರಥಮ ಚಿಕಿತ್ಸೆ ನೀಡಿದ ವೈದ್ಯರ ತಂಡ ಬಳಿಕ ಆಂಬುಲೆನ್ಸ್’ನಲ್ಲಿ ಮಗುವನ್ನು ಇಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದೆ. ಸ್ಥಳದಲ್ಲಿ ಜಮಾಯಿಸಿದ್ದ ಸಾವಿರಾರು ಮಂದಿಯ ಪ್ರಾರ್ಥನೆ ಕೊನೆಗೂ ಫಲಿಸಿದ್ದು, ಮಗು ಜೀವಂತವಾಗಿ ಬಂದಿದೆ.
ಮಗುವನ್ನು ಜೀವಂತವಾಗಿ ಕೊಳವೆ ಬಾವಿಯಿಂದ ಹೊರತೆಗೆದ ನಂತರ ಇಡೀ ಗ್ರಾಮದಲ್ಲಿ ಹರ್ಷೋದ್ಘಾರ ಹಾಗೂ ಸಂಭ್ರಮ ಮುಗಿಲು ಮಟ್ಟಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post