ಕಲ್ಪ ಮೀಡಿಯಾ ಹೌಸ್ | ವಿಜಯಪುರ |
ಕೌಟುಂಬಿಕ ಕಾರಣದ ಹಿನ್ನೆಲೆಯಲ್ಲಿ ತಾನೇ ಹೆತ್ತ ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದ ತಾಯಿಯೊಬ್ಬಳು ತಾನೂ ಸಹ ನೀರಿಗೆ ಹಾರಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದಲ್ಲಿ ನಡೆದಿದೆ.
ಮೃತ ಮಕ್ಕಳನ್ನು ತನು ಲಿಂಗರಾಜ್ ಭಜಂತ್ರಿ(5), ರಕ್ಷಾ ಲಿಂಗರಾಜ್ ಭಜಂತ್ರಿ(3) ಹಾಗೂ 13 ತಿಂಗಳ ಅವಳಿ ಜವಳಿ ಹಸೇನ, ಹುಸೇನ ಎಂದು ಗುರುತಿಸಲಾಗಿದೆ. ನೀರಿಗೆ ಹಾರಿಕೊಂಡಿದ್ದ ತಾಯಿ ಭಾಗ್ಯಶ್ರೀಯನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
Also Read>> ಚಿಕ್ಕಬಳ್ಳಾಪುರ | ಭೀಕರ ರಸ್ತೆ ಅಪಘಾತ | ಯುವ ಪತ್ರಕರ್ತ ಭರತ್ ದುರ್ಮರಣ
ಲಿಂಗರಾಜ್ ಭಜಂತ್ರಿ ಕುಟುಂಬದಲ್ಲಿ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿತ್ತು. ಇದರಿಂದ ನೊಂದಿದ್ದ ಲಿಂಗರಾಜ್, ಇದೇ ಸಿಟ್ಟಿನಲ್ಲಿ ಪತ್ನಿ ಭಾಗ್ಯಶ್ರೀ ಮೇಲೆ ಕೋಪಗೊಂಡು ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಮನನೊಂದು ಭಾಗ್ಯಶ್ರೀ ದುಷ್ಕೃತ್ಯ ಎಸಗಿದ್ದಾಳೆ ಎಂದು ಹೇಳಲಾಗಿದೆ.
ನಿಡಗುಂದಿ ತಾಲೂಕಿನ ಬೇನಾಳ ಬಳಿಯ, ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಘಟನೆ ನಡೆದಿದೆ. ಮಕ್ಕಳನ್ನು ಕಾಲುವೆಗೆ ಎಸೆದಿದ್ದನ್ನು ನೋಡಿದ ಸ್ಥಳೀಯರು ಮಕ್ಕಳ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮಕ್ಕಳು ನೀರು ಪಾಲಾಗಿದ್ದವು. ಸ್ಥಳೀಯರು ತಾಯಿಯನ್ನು ರಕ್ಷಣೆ ಮಾಡಿದ್ದಾರೆ.
ಸ್ಥಳೀಯ ಮೀನುಗಾರರು ಇಬ್ಬರು ಹೆಣ್ಣು ಮಕ್ಕಳ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಗಂಡು ಮಕ್ಕಳ ಮೃತದೇಹಕ್ಕಾಗಿ ಹುಡುಕಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post