No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ವಿಜಯಪುರ

ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳ ಅಳವಡಿಕೆಯತ್ತ ಹೆಚ್ಚಿನ ಗಮನ ನೀಡಿ: ಸಚಿವೆ ಶಶಿಕಲಾ ಜೊಲ್ಲೆ

kalpa News by kalpa News
January 13, 2022
in ವಿಜಯಪುರ
0
ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳ ಅಳವಡಿಕೆಯತ್ತ ಹೆಚ್ಚಿನ ಗಮನ ನೀಡಿ: ಸಚಿವೆ ಶಶಿಕಲಾ ಜೊಲ್ಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  |

ಕೋವಿಡ್‌ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚಿನ ಸೋಂಕು ತಗಲುವ ಸಾಧ್ಯತೆಯನ್ನು ತಜ್ಞರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮೂರನೇ ಅಲೆಯಲ್ಲಿ ಒಟ್ಟಾರೆಯಾಗಿ 50 ಮಕ್ಕಳು ಕೋವಿಡ್‌ ಸೊಂಕಿಗೆ ತುತ್ತಾಗಿದ್ದಾರೆ. ಈ ನಿಟ್ಟಿನಲ್ಲಿ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳ ಅಳವಡಿಕೆಯತ್ತ ಹೆಚ್ಚಿನ ಗಮನ ನೀಡುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು (ಕೋವಿಡ್‌ ಮತ್ತು ಪ್ರವಾಹ ಪರಿಸ್ಥಿತಿ ನಿರ್ವಹಣೆ) ಹಾಗೂ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್‌ ಮತ್ತು ಬೆಳೆಹಾನಿ ಕುರಿತ ಪರಿಶೀಲನಾ ಸಭೆಯ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕೋವಿಡ್‌ ಸೋಂಕು ನಿರ್ವಹಣೆಯ ಕುರಿತಂತೆ ಜಿಲ್ಲಾಡಳಿತ ಇದುವರೆಗೂ ಕೈಗೊಂಡ ಕ್ರಮಗಳ ಬಗ್ಗೆ ಹಾಗೂ ಗಡಿ ಪ್ರದೇಶದಿಂದ ಬರುವವರ ತಪಾಸಣೆಗೆ ಕೈಗೊಂಡಂತಹ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಸಚಿವರು ಪಡೆದುಕೊಂಡರು. ಅಲ್ಲದೆ, ಮೂರನೇ ಅಲೆ ಪ್ರಬಲವಾದರೆ ಅದರ ಸುಲಲಿತ ನಿರ್ವಹಣೆಗೆ ಮುಂಜಾಗ್ರತವಾಗಿ ತಗೆದುಕೊಳ್ಳಲಾದ ಕ್ರಮಗಳ ಬಗ್ಗೆ ತಿಳಿದುಕೊಂಡರು.

ರಾಜ್ಯದಲ್ಲಿ ದಿನೇ ದಿನೇ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಾರಿಯ ಅಲೆಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಜ್ಜಾಗಬೇಕು. ಅಲ್ಲದೆ, ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಂಭವವಿರುವುದರಿಂದ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಆಸ್ಪತ್ರೆಯಲ್ಲಿರುವ ಹಳೇ ಡಯಾಲಿಸಿಸ್‌ ವಾರ್ಡ್‌ ನ್ನು ಬದಲಾಯಿಸಿ 10 ವೆಂಟಿಲೇಟರ್‌ಗಳುಳ್ಳ ಚಿಕ್ಕಮಕ್ಕಳ ತುರ್ತು ಚಿಕಿತ್ಸಾ ನಿಗಾ ಘಟಕ ನಿರ್ಮಾಣದ ಸಿವಿಲ್‌ ಹಾಗೂ ಎಲೆಕ್ಟ್ರಿಕಲ್‌ ಕಾಮಾಗಾರಿ ಪೂರ್ಣಗೊಳಿಸಲಾಗಿದೆ. ಹಾಗೂ 14 ಹಾಸಿಗೆಯ ಎಚ್‌.ಡಿ.ಯು ಸಾಮಾನ್ಯ ತೀವ್ರ ನಿಗಾ ಘಟಕವನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಮಕ್ಕಳ ಲಸಿಕೆ ಯಲ್ಲಿ ಶೇಕಡಾ 100 ರಷ್ಟು ಸಾಧನೆಗೆ ಕ್ಲಾಸ್‌ ಟೀಚರ್ಸ್‌ಗಳಿಗೆ ಜವಾಬ್ದಾರಿ: ವಿಜಯಪುರ ಜಿಲ್ಲೆಯಲ್ಲಿ 15 ರಿಂದ 18 ವಯಸ್ಸಿನ ಮಕ್ಕಳ ಲಸಿಕಾಕರಣದಲ್ಲಿ ಶೇಡಕಾ 50 ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಇದನ್ನು ನೂರರಷ್ಟು ಸಾಧನೆ ಮಾಡುವ ನಿಟ್ಟಿನಲ್ಲಿ ಆಯಾ ಶಾಲಾ ಶಿಕ್ಷಕರುಗಳಿಗೆ ಜವಾಬ್ದಾರಿಯನ್ನು ನೀಡಲು ಸಚಿವರು ಸೂಚನೆ ನೀಡಿದರು.

ಲಸಿಕಾಕರಣದಲ್ಲಿ ವಿಜಯಪುರ ಜಿಲ್ಲೆ ಉತ್ತಮ ಸಾಧನೆ: ಎರಡು ತಿಂಗಳ ಹಿಂದೆಯೇ ಮೊದಲ ಡೋಸ್‌ ಲಸಿಕಾಕರಣ ಕಾರ್ಯಕ್ರದಲ್ಲಿ ಶೇಡಕಾ 100 ರಷ್ಟು ಪ್ರಗತಿ ಸಾಧಿಸಿದ ಮೂರನೇ ಜಿಲ್ಲೆಯಾಗಿರುತ್ತದೆ. ಅಲ್ಲದೆ, ಎರಡನೇ ಡೋಸ್‌ ನೀಡುವಲ್ಲಿ ಶೇಕಡಾ 80 ರಷ್ಟು ಪ್ರಗತಿ ಸಾಧಿಸಲಾಗಿದೆ. ಈ ರೀತಿ ಲಸಿಕಾಕರಣದಲ್ಲಿ ರಾಜ್ಯದಲ್ಲಿ ಉತ್ತಮ ಸ್ಥಾನ ಹೊಂದಿದೆ. ಉತ್ತಮ ಪ್ರಗತಿ ಸಾಧಿಸುವಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಕೋವಿಡ್‌ ಪ್ರಕರಣಗಳು: ಜನವರಿ 1 ರಿಂದ ಇದುವರೆಗೂ 15,842 ಸ್ಯಾಂಪಲ್ ಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 180 ಪ್ರಕರಣಗಳು ಮಾತ್ರಾ ಕರೋನಾ ಪಾಸಿಟಿವ್‌ ಬಂದಿದ್ದು, ಜಿಲ್ಲೆಯ ಪಾಸಿಟಿವಿಟಿ ರೇಟ್‌ ಶೇ1.14 ರಷ್ಟು ಇದೆ. ಜಿಲ್ಲೆಯಲ್ಲಿ 160 ಸಕ್ರೀಯ ಕೇಸ್‌ಗಳಿದ್ದು 12 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದವರನ್ನು ಹೋಂ ಐಸೋಲೇಷನ್‌ ನಲ್ಲಿ ಇಡಲಾಗಿದೆ.

ಆಮ್ಲಜನಕ ಸರಬರಾಜು: ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಮ್ಯಾನಿಫೋಲ್ಡ್‌ನಿಂದ ತುರ್ತು ನಿಗಾ ಘಟಕ 1,2 ಮತ್ತು 3 ಘಟಕಗಳಿಗೆ ಆಮ್ಲಜನಕ ಸರಾಗವಾಗಿ ಪೂರೈಕೆ ಕುರಿತು ಪ್ರತ್ಯೇಕ ಪೈಪ್‌ಲೈನ್‌ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಜಿಲ್ಲಾಡಳಿತದ ಬಳಿ 642 ಆಕ್ಸಿಜನ್‌ ಕಾನ್ಸೆಂಟ್ರೇಟರ್‌ಗಳಿವೆ. ಇವುಗಳನ್ನು ಅಗತ್ಯಕ್ಕೆ ಅನುಗುಣವಾಗಿ ಆರೋಗ್ಯ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲಾ ತಜ್ಞರ ಸಮಿತಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆ: ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಜಿಲ್ಲಾ ತಜ್ಞರ ಸಮಿತಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಮುಖ್ಯಸ್ಥರುಗಳ ಸಭೆಯನ್ನು ನಡೆಸಲಾಗಿದೆ. ಜನವರಿ 10, 2022 ರಿಂದ ಶೇಕಡಾ 75 ರಷ್ಟು ಹಾಸಿಗೆಗಳನ್ನು ಕೋವಿಡ್‌ ಸೊಂಕಿತರ ಚಿಕಿತ್ಸೆಗೆ ಕಾಯ್ದಿರಿಸಲು ಆದೇಶಿಸಲಾಗಿದೆ ಎಂದರು.

ಆಮ್ಲಜನಕ ಘಟಕಗಳ ನಿರ್ಮಾಣ: ಜಿಲ್ಲೆಯಲ್ಲಿ ಒಟ್ಟಾರೆಯಾಗಿ 5 ಆಮ್ಲಜನಕ ಉತ್ಪಾದನಾ ಘಟಕಗಳು ಮಂಜೂರಾಗಿದ್ದು ಕಾಮಗಾರಿ ಪೂರ್ಣಗೊಂಡಿವೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಅಳವಡಿಸಲಾಗಿರುವ 1000 ಎಲ್‌ಪಿಎಂ ಸಾಮರ್ಥ್ಯದ ಆಮ್ಲಜನಕ ಘಟಕದ ನಿರ್ವಹಣೆಯಲ್ಲಿ ತಾಂತ್ರಿಕ ತೊಂದರೆಗಳು ಕಂಡುಬಂದಿವೆ. ಇದನ್ನು ಶೀಘ್ರವಾಗಿ ಸರಿಪಡಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಲಸಿಕೆ ನೀಡಿಕೆ ಕಾರ್ಯವನ್ನು ಚುರುಕುಗೊಳಿಸಲು ಸೂಚನೆ: ಕರೋನಾ ಮಹಾಮಾರಿಯನ್ನು ನಿಯಂತ್ರಿಸಲು ಲಸಿಕೆ ಪ್ರಮುಖ ಅಸ್ತ್ರವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ಕೆ ಅದ್ಯತೆ ನೀಡಬೇಕು. ಅದರಲ್ಲೂ ಮಕ್ಕಳಿಗೆ ಹಾಗೂ ಪ್ರಿಕಾಷನರಿ ಡೋಸ್‌ ನೀಡುವ ಕಾರ್ಯವನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದರು.

ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಗೆ ಸೂಚನೆ: ಈಗಾಗಲೇ ಚೆಕ್‌ ಪೋಸ್ಟ್‌ಗಳಲ್ಲಿ ಸ್ವಾಬ್‌ ಕಲೆಕ್ಷನ್‌ ಸೆಂಟರ್‌ಗಳನ್ನು ತೆರೆಯಲಾಗಿದೆ. ಚೆಕ್‌ ಪೋಸ್ಟ್‌ಗಳಲ್ಲಿ 24*7 ಗಂಟೆಯೂ ತಪಾಸಣೆ ನಡೆಸಲಾಗುತ್ತಿದ್ದು, ಸಿಬ್ಬಂದಿಗಳ ಕೊರತೆ ಸವಿವರವಾಗಿ ಚರ್ಚಿಸಲಾಯಿತು. ಎನ್‌ ಜಿ ಓ ಗಳ ಮೂಲಕ ಸೇವೆಯನ್ನು ಪಡೆಯಲು ಪ್ರಯತ್ನಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು. ಅಕ್ಕಪಕ್ಕದ ರಾಜ್ಯಗಳಿಂದ ಆಗಮಿಸುವವರನ್ನು ತೀವ್ರ ತಪಾಸಣೆಗೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಸಿದ್ದಾಪುರ ಚೆಕ್‌ಪೋಸ್ಟ್‌ ಗೆ ಭೇಟಿ ನೀಡಿ ಪರಿಶೀಲನೆ: ಮಹರಾಷ್ಟ್ರ ಸಾಂಗ್ಲಿ ಜಿಲ್ಲೆಯ ಗಡಿ ಭಾಗದವಾಗಿರುವ ಸಿದ್ದಾಪುರ ಚೆಕ್‌ಪೋಸ್ಟ್‌ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಕ್ಕ ಪಕ್ಕದ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವ ತಪಾಸಣೆ ನಡೆಸುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಬೆಳೆಹಾನಿ ಕುರಿತು: ಇನ್ನೂ ಬೆಳೆಹಾನಿ ಪರಿಹಾರ ಲಭ್ಯವಾಗಿಲ್ಲ ಎಂಬ ಹಲವಾರು ದೂರುಗಳು ಬಂದಿವೆ. ಅರ್ಧಕ್ಕಿಂತ ಹೆಚ್ಚಿನ ಸಂಖ್ಯೆಯ ರೈತರಿಗೆ ಇದುವರೆಗೂ ಪರಿಹಾರ ದೊರೆತಿಲ್ಲ. ಇದರ ಬಗ್ಗೆ ವಿಶೇಷ ಗಮನ ಹರಿಸಿ ಶೀಘ್ರ ಬೆಳೆಹಾನಿ ಪರಿಹಾರ ರೈತರಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಜಿಲ್ಲೆಯ ಪ್ರಧಾನ ಬೆಳೆಗಳಾದ ದ್ರಾಕ್ಷಿ ಮತ್ತು ತೊಗರಿ ಬೆಳೆಗೆ ವಿಶೇಷ ಪ್ಯಾಕೇಜ್‌ ಘೋಷಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಪಿ ಸುನೀಲ್‌ ಕುಮಾರ್‌, ವಿಜಯಪುರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಹರಿ ಗೊಳಸಂಗಿ, ಸಿಂಧಿಗಿ ಶಾಸಕರ ರಮೇಶ್‌ ಬೂಸನೂರು, ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಅಶೋಕ್‌ ಅಲ್ಲಾಪುರ್‌, ಜಿಲ್ಲಾಪಂಚಾಯತ್‌ ಸಿಇಓ ಗೋವಿಂದ ರೆಡ್ಡಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMinister Shashikala JolleNews in KannadaNews KannadaVijayayapuraವಿಜಯಪುರಸಚಿವೆ ಶಶಿಕಲಾ ಜೊಲ್ಲೆ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಲ್ಸ್ ಪೋಲಿಯೊ ಅಭಿಯಾನ ಶೇ.100ರಷ್ಟು ಯಶಸ್ವಿಯಾಗಲು ಸೂಕ್ತ ಕ್ರಮ: ಡಿಸಿ ಸೆಲ್ವಮಣಿ

Next Post

ಚಿಕ್ಕಪೇಟೆ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ: ಉದಯ್ ಗರುಡಾಚಾರ್ ಭರವಸೆ

kalpa News

kalpa News

Next Post
ಚಿಕ್ಕಪೇಟೆ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ: ಉದಯ್ ಗರುಡಾಚಾರ್ ಭರವಸೆ

ಚಿಕ್ಕಪೇಟೆ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ: ಉದಯ್ ಗರುಡಾಚಾರ್ ಭರವಸೆ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL