ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ವಿಜಯಪುರ: ವಿಜಯಪುರ ವಿಮಾನ ನಿರ್ಮಾಣ ಕಾಮಗಾರಿಯು ಉತ್ತಮ ಗುಣಮಟ್ಟದೊಂದಿಗೆ ವೇಗವಾಗಿ ನಡೆಯುತ್ತಿದ್ದು, ನಿಗಧಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದರು.
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಅವರು, 95 ಕೋಟಿ ರೂ ವೆಚ್ವದಲ್ಲಿ ಮೊದಲ ಹಂತದ ಕಾಮಗಾರಿಯು ತ್ವರಿತವಾಗಿ ನಡೆಯುತ್ತಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿರುವುದು ತೃಪ್ತಿಕರ ಸಂಗತಿಯಾಗಿದೆ. ೨ನೇ ಹಂತದ ಕಾಮಗಾರಿಯು 125 ಕೋಟಿ ರೂ ವೆಚ್ವದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ನಂತರ ಡೂಪ್ಲೆಕ್ಸ್ ಕೋರ್ಟ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿದ ಅವರು, ಈ ಕಾಮಗಾರಿಯು ಪೂರ್ಣಪ್ರಮಾಣದಲ್ಲಿ ಪೂರ್ಣಗೊಂಡಿದ್ದು, ಕಂಪ್ಯೂಟರ್ ಜೋಡಣೆ, ಇಂಟರ್ ನೆಟ್ ಸಂಪರ್ಕ ಕಾಮಗಾರಿಯು ನಡೆಯುತ್ತಿದೆ. ಈ ಕಾಮಗಾರಿಯ ಗುಣಮಟ್ಟ ಹಾಗೂ ಕಟ್ಟಡ ವಿನ್ಯಾಸಕ್ಕೆ ಡಿಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post