No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಫೆ.4, 5ರಂದು ವಿಜಯಪುರದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ: ಶಿವಾನಂದ ತಗಡೂರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 23, 2023
in ಕೊಪ್ಪಳ
0
ಫೆ.4, 5ರಂದು ವಿಜಯಪುರದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ: ಶಿವಾನಂದ ತಗಡೂರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  |

ಬಸವನಾಡು, ಗೊಮ್ಮಟ ಬೀಡು, ಶ್ರೀ ಸಿದ್ದೇಶ್ವರ ಸ್ವಾಮೀಜಿ ಕಾರ್ಯಕ್ಷೇತ್ರ ವಿಜಯಪುರದಲ್ಲಿ ಫೆಬ್ರವರಿ 4&5 ರಂದು ಶನಿವಾರ ಮತ್ತು ಭಾನುವಾರ ಎರಡು ದಿನ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನಡೆಯಲಿದೆ.

ನಗರದ ಪತ್ರಿಕಾ ಭವನದಲ್ಲಿ ಸಮ್ಮೇಳನದ ಸಿದ್ಧತೆಗಳನ್ನು ಪರಿಶೀಲಿಸಲು ಕರೆಯಲಾಗಿದ್ದ ವಿವಿಧ ಸಮಿತಿಗಳ ಸಭೆಯ ಸಂದರ್ಭದಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಮ್ಮೇಳನ ಯಶಸ್ವಿಗೆ ಎಲ್ಲರ ಸಹಕಾರ ಕೋರಿದರು.

ಐತಿಹಾಸಿಕ ವಿಜಯಪುರ ನಗರದಲ್ಲಿ ಪ್ರಪ್ರಥಮ ಬಾರಿಗೆ ಪತ್ರಕರ್ತರ ರಾಜ್ಯ ಸಮ್ಮೇಳನ ಆಯೋಜಿಸಲಾಗಿದೆ. ಗಡಿಭಾಗದಲ್ಲಿ ನಡೆಯುವ ಈ ಸಮ್ಮೇಳನ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ ಎಂದರು.
ರಾಜ್ಯದ ಬೇರೆ- ಬೇರೆ ಜಿಲ್ಲೆಗಳಿಂದ ಆಗಮಿಸುವ ಪ್ರತಿನಿಧಿಗಳಿಗೆ ಊಟ, ವಸತಿ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಿ ಒಳ್ಳೆಯ ಆತಿಥ್ಯ ನೀಡಿದರೆ ಬೇರೆ ಜಿಲ್ಲೆಗಳಿಂದ ಬಂದ ಪ್ರತಿನಿಧಿಗಳು ಈ ಜಿಲ್ಲೆಯ ಬಗ್ಗೆ ಮನದಲ್ಲಿ ಸವಿನೆನಪು ಇಟ್ಟುಕೊಂಡು ತಮ್ಮೂರಿಗೆ ಹೋಗುವರು. ಈ ಸಮ್ಮೇಳನ ನಮ್ಮ ಮನೆಯ ಕಾರ್ಯಕ್ರಮವೆಂದು ತಿಳಿದು ಎಲ್ಲರೂ ಉತ್ಸಾಹದಿಂದ ಒಗ್ಗೂಡಿ ಕೆಲಸ ಮಾಡುವ ಮೂಲಕ ಸಮ್ಮೇಳನದ ಯಶಸ್ಸಿಗೆ ಕಾರಣರಾಗಬೇಕು ಎಂದು ಅವರು ಹೇಳಿದರು.

ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜ.9&10‌ರಂದು ಮುಂದೂಡಲಾಗಿತ್ತು. ಮುಖ್ಯಮಂತ್ರಿ ಸಮ್ಮತಿಯೊಂದಿಗೆ ಫೆ.4&5 ರಂದು ಸಮ್ಮೇಳನ ದಿನಾಂಕ ನಿಗದಿ ಮಾಡಲಾಗಿದೆ ಎಂದರು.

ಶ್ರೀ ಸಿದ್ಧೇಶ್ವರ ಶ್ರೀಗಳು ಈ ಸಮ್ಮೇಳನದ ಸಾನಿಧ್ಯ ವಹಿಸಲು ಸಂತೋಷದಿಂದ ಒಪ್ಪಿಕೊಂಡು ಸಮ್ಮೇಳನ ಗಡಿಭಾಗದಲ್ಲಿ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದ್ದರು. ಅವರ ಸಾನಿಧ್ಯದಲ್ಲಿ ಈ ಸಮ್ಮೇಳನ ನಡೆಯಬೇಕಾಗಿತ್ತು. ಆದರೆ ಅವರು ನಮ್ಮನ್ನಗಲಿರುವುದು ನಮಗೆಲ್ಲ ತುಂಬಾ ದುಃಖವನ್ನುಂಟು ಮಾಡಿದೆ ಎಂದರು.
ಫೆ. 4 ರಂದು ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಮ್ಮೇಳನ ಉದ್ಘಾಟಿಸಲಿದ್ದಾರೆ.
ಸಚಿವರು, ಸ್ಥಳೀಯ ಶಾಸಕರು ಸಮ್ಮೇಳನದಲ್ಲಿ ಭಾಗವಹಿಸುವರು ಎಂದರು.

Also read: ಆಟದ ಜೊತೆಗೆ ನೀಡುವ ಜ್ಞಾನ ಮಕ್ಕಳ ವಿಕಸನಕ್ಕೆ ಪೂರಕ: ದಯಾನಂದ ಕಲ್ಲೇರ್ ಅಭಿಪ್ರಾಯ

ಫೆ. 5 ಪ್ರತಿನಿಧಿಗಳ ಸಮಾವೇಶ ನಡೆಯುವುದು. ನಂತರ ಸಮಾರೋಪ ಸಮಾರಂಭ ಹಾಗೂ ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜರುಗುವುದು. ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸುವರು. ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭದಲ್ಲಿ ಹಲವಾರು ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸುವರು ಎಂದರು.

ಈ ಬಾರಿ ಸಮ್ಮೇಳನದಲ್ಲಿ 3 ಗೋಷ್ಠಿಗಳನ್ನು ಆಯೋಜಿಸಲಾಗಿದೆ. ನವಮಾಧ್ಯಮ ಮತ್ತು ಪತ್ರಕರ್ತರು ಎಂಬ ವಿಷಯದ ಬಗ್ಗೆ ಒಂದು ಗೋಷ್ಠಿ ನಡೆದರೆ, ಸುದ್ದಿಮನೆ ಮತ್ತು ಮಹಿಳೆಯರು ಎಂಬ ವಿಷಯದ ಬಗ್ಗೆ ಮತ್ತೊಂದು ಗೋಷ್ಠಿ ನಡೆಯಲಿದೆ.

ಗಡಿ ಭಾಗದ ಮಾಧ್ಯಮಗಳ ಪಾತ್ರ ಕುರಿತು ಈತನಕ ಚರ್ಚೆಗಳು ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಮಾಧ್ಯಮ ಎಂಬ ವಿಷಯ ಕುರಿತು ವಿಶೇಷ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ ಎಂದರು.
ಸುದ್ದಿ ಮನೆಯಲ್ಲಿ ಪತ್ರಿಕಾ ವಿತರಕರು ಮಹತ್ವದ ಕೊಂಡಿಯಾಗಿದ್ದಾರೆ. ಆ ಕಾರಣಕ್ಕಾಗಿ ಪತ್ರಿಕಾ ವಿತರಕರ ಸಮಸ್ಯೆಗಳ ಕುರಿತು ಸಂವಾದ ನಡೆಯಲಿದೆ ಎಂದು ಶಿವಾನಂದ ತಗಡೂರ ವಿವರಿಸಿದರು.

ಇದೇ ಸಮ್ಮೇಳನದಲ್ಲಿ ವಿಜಯಪುರ ಜಿಲ್ಲೆಯ ಹತ್ತು ಜನ ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನವಿರುತ್ತದೆ ಎಂದರು.

ಎರಡು ದಿನಗಳ ಈ ಸಮ್ಮೇಳನದಲ್ಲಿ ಐದು ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ಎರಡೂವರೆ ಸಾವಿರ ಪತ್ರಕರ್ತರು ಪ್ರತಿನಿಧಿಗಳ ನೊಂದಾಯಿಸಿಕೊಂಡಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ, ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷರಾದ ಇಂದುಶೇಖರ ಮಣೂರ, ಪ್ರಕಾಶ ಬೆಣ್ಣೂರ, ಫಿರೋಜ್ ರೋಜಿನದಾರ, ಕಾರ್ಯದರ್ಶಿಗಳಾದ ಅವಿನಾಶ ಬಿದರಿ, ಮಲ್ಲಿಕಾರ್ಜುನ ಕೆಂಭಾವಿ, ಖಜಾಂಚಿಗಳಾದ ರಾಹುಲ ಆಪ್ಟೆ, ದೀಪಕ ಶಿಂತ್ರೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಡಿ.ಬಿ.ವಡವಡಗಿ, ಕೆ.ಕೆ.ಕುಲಕರ್ಣಿ, ಕೌಶಲ್ಯ ಪನ್ನಾಳಕರ, ವಿಜಯವಾಣಿ ಸ್ಥಾನಿಕ ಸಂಪಾದಕ ಕೆ.ಎನ್.ರಮೇಶ, ಅಕ್ಕಮಹಾದೇವಿ ಮಹಿಳಾ ವಿ.ವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಓಂಕಾರ ಕಾಕಡೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಲಿಂ.ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಮೂಲಕ ಗೌರವ ನಮನ ಸಲ್ಲಿಸಿ ನಂತರ ಎರಡು ನಿಮಿಷ ಮೌನ ಆಚರಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaVijayapuraವಿಜಯಪುರ
Share196Tweet123Send
Previous Post

ಆಟದ ಜೊತೆಗೆ ನೀಡುವ ಜ್ಞಾನ ಮಕ್ಕಳ ವಿಕಸನಕ್ಕೆ ಪೂರಕ: ದಯಾನಂದ ಕಲ್ಲೇರ್ ಅಭಿಪ್ರಾಯ

Next Post

ಸ್ಯಾಂಡಲ್‌ವುಡ್ ಹಿರಿಯ ನಟ ಲಕ್ಷ್ಮಣ್ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ಯಾಂಡಲ್‌ವುಡ್ ಹಿರಿಯ ನಟ ಲಕ್ಷ್ಮಣ್ ವಿಧಿವಶ

ಸ್ಯಾಂಡಲ್‌ವುಡ್ ಹಿರಿಯ ನಟ ಲಕ್ಷ್ಮಣ್ ವಿಧಿವಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

April 3, 2026
“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

April 3, 2026
SWR Mysuru Division Excels with Record Passenger Revenue and Strong Commercial Growth

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ, ಹಲವು ಮೈಲಿಗಲ್ಲು

April 3, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಲಂಚದ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಧಿಕಾರಿಗೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ: ಕೋರ್ಟ್ ಆದೇಶ

April 3, 2026
SWR to run special trains for Good Friday, Easter rush

Extension of Partial Cancellation of Trains between Chitradurg-Chikjajur

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL