ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಿಷೇಧಾಜ್ಞೆಯ ನಡುವೆಯೂ ನಡೆಸಲಾಗುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ರಾತ್ರಿಯವರೆಗೂ ಕರ್ಫ್ಯೂ ವಿಧಿಸಲಾಗಿದೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾತನಾಡಿರುವ ಮಂಗಳೂರು ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ, ಮಂಗಳೂರಿನ ಹಲವು ಭಾಗಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ಕರ್ಫ್ಯೂ ವಿಧಿಸಲಾಗಿದೆ ಎಂದಿದ್ದಾರೆ.
ಮಂಗಳೂರಿನ ಕೇಂದ್ರ ಉಪವಿಭಾಗ ವ್ಯಾಪ್ತಿಗೆ ಬರುವ ಬಂದರು, ಪಾಂಡೇಶ್ವರ, ಉರ್ವ, ಬರ್ಕೆ ಮತ್ತು ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ.
ಇನ್ನು, ಮುಂಜಾಗ್ರತಾ ಕ್ರಮವಾಗಿ ಮಂಗಳೂರಿನ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ನಾಳೆ ರಜೆ ಘೋಷಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post