ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆ ಮಿತಿ ಮೀರಿದ್ದು, ಇದನ್ನು ಸರಿಪಡಿಸಲು ಆಡಳಿತ ವ್ಯವಸ್ಥೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.
ಇದರ ಬೆನ್ನಲ್ಲೇ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಸಹ ನೀರಿನ ಬರ ತಟ್ಟಿದ್ದು, ಈ ಹಿನ್ನೆಲೆಯಲ್ಲಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ನೇತ್ರಾವತಿ ನದಿಯಲ್ಲೂ ಸಹ ನೀರಿನ ಹರಿವು ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಹಂತದಲ್ಲಿ ಯಾತ್ರಾರ್ಥಿಗಳು ಕ್ಷೇತ್ರಕ್ಕೆ ಭೇಟಿ ನೀಡಿದರೆ ನೀರಿನ ಬಳಕೆ ಹೆಚ್ಚಾಗುತ್ತದೆ. ಇದನ್ನು ಸರಿದೂಗಿಸಲು ನೀರಿನ ಕೊರೆತೆಯಿದೆ. ಹೀಗಾಗಿ, ಯಾತ್ರಾರ್ಥಿಗಳು ಕೆಲವು ದಿನಗಳ ಕಾಲ ತಮ್ಮ ಪ್ರವಾಸವನ್ನು ಮುಂದೂಡುವುದು ಉತ್ತಮ ಎಂದು ಅವರು ಕೋರಿದ್ದಾರೆ.
Discussion about this post