ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜಾನೆ 9.30ಕ್ಕೆ ಗೋಂಧಿ ಚಟ್ನಹಳ್ಳಿಯಲ್ಲಿ ಕಾರ್ಯಕರ್ತರೊಂದಿಗೆ ವರ್ಚವಲ್ ಸಂವಾದ ನಡೆಸಲಿದ್ದಾರೆ.
ಇದಕ್ಕಾಗಿ ಎಲ್’ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದ್ದು, ಬೂತ್ ಹಾಗೂ ಜಿಲ್ಲಾ ಪಂಚಾಯತ್ ಮಟ್ಟದ ಕಾರ್ಯಕರ್ತರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
ಗೋಂಧಿ ಚಟ್ನಹಳ್ಳಿಯ ಶ್ರೀ ಮಹೇಶ್ವರ ಸಮುದಾಯ ಭವನದಲ್ಲಿ ಈ ವರ್ಚುವಲ್ ಸಂವಾದ ನಡೆಯಲಿದೆ.
ಇದೇ ವೇಳೆ ರಾಜ್ಯದ ವಿವಿಧ ಕಡೆಗಳಲ್ಲಿಯೂ ಸಹ ಪ್ರಧಾನಿಯವರು ಕಾರ್ಯಕರ್ತರೊಂದಿಗೆ ಇಂದು ಸಂವಾದ ನಡೆಸಲಿದ್ದು, ಇದಕ್ಕಾಗಿ ಸುಮಾರು 24 ಲಕ್ಷ ಮಂದಿ ನಮೋ ಆಪ್ ಡೌನ್ ಲೋಡ್ ಮಾಡಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post