ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ವಿಶಾಖಪಟ್ಟಣಂ ವಿಷಾನಿಲ ದುರಂತ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರ ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಘಟನೆ ಕುರಿತಂತೆ ಗೃಹ ಇಲಾಖೆ ಹಾಗೂ ಎನ್’ಡಿಎಂಎ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ವಿಶಾಖಪಟ್ಟಣಂ ಎಲ್ಲ ಜನತೆಯ ಸುರಕ್ಷತೆ ಹಾಗೂ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Spoke to officials of MHA and NDMA regarding the situation in Visakhapatnam, which is being monitored closely.
I pray for everyone’s safety and well-being in Visakhapatnam.
— Narendra Modi (@narendramodi) May 7, 2020
ಇನ್ನು, ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಇದರ ಬಗ್ಗೆ ಕೇಳಿದಾಗ ನನಗೆ ಆಘಾತವಾಗಿದೆ. ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರಿಗೆ ಪೀಡಿತರಿಗೆ ಅಗತ್ಯವಿರುವ ಎಲ್ಲ ಬೆಂಬಲ ಮತ್ತು ಸಹಾಯವನ್ನು ಒದಗಿಸಬೇಕೆಂದು ನಾನು ಕೋರುತ್ತೇನೆ. ಸಾವಿಗೀಡಾದವರ ಕುಟುಂಬಗಳಿಗೆ ಸಂತಾಪ ಸೂಚಿಸಿಸುತ್ತೇನೆ. ಆಸ್ಪತ್ರೆಗೆ ದಾಖಲಾದವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
I’m shocked to hear about the
#VizagGasLeak . I urge our Congress workers & leaders in the area to provide all necessary support & assistance to those affected. My condolences to the families of those who have perished. I pray that those hospitalised make a speedy recovery.— Rahul Gandhi (@RahulGandhi) May 7, 2020
ಸಿಎಂ ಯಡಿಯೂರಪ್ಪ ಟ್ವೀಟ್
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, ವಿಶಾಖಪಟ್ಟಣಂನಲ್ಲಿ ನಡೆದ ಘಟನೆಯಿಂದ ತೀವ್ರ ದುಃಖಿತವಾಗಿದೆ. ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಕೋರುತ್ತೇನೆ ಹಾಗೂ ಅಸ್ವಸ್ಥಗೊಂಡವರು ಶೀಘ್ರ ಗುಣಮುಖರಾಗಲು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Extremely saddened by the incident in Visakhapatnam. My thoughts and prayers are with the families affected.@AndhraPradeshCM#VizagGasLeakage
— B.S. Yediyurappa (@BSYBJP) May 7, 2020
Get in Touch With Us info@kalpa.news Whatsapp: 9481252093






Discussion about this post