ಕಲ್ಪ ಮೀಡಿಯಾ ಹೌಸ್ | ವಿಶಾಖಪಟ್ಟಣಂ |
ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ 10 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ Andrapradesh CM YSJagan ಅವರ ಕಚೇರಿ ತಿಳಿಸಿದೆ.
ಈ ಬಗ್ಗೆ ಸಿಎಂಒ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಬೇರೆ ರಾಜ್ಯಗಳ ಜನರು ಸಾವನ್ನಪ್ಪಿದರೆ, ದುಃಖಿತ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ. 50,000 ಪರಿಹಾರವನ್ನು ನೀಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಳ್ಳಲಾಗಿದೆ.
ನಿನ್ನೆ ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ. ಅಪಘಾತದಲ್ಲಿ 3 ಬೋಗಿಗಳು ಜಖಂಗೊಂಡಿವೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಥಳೀಯ ಆಡಳಿತ, ಎನ್‌ಡಿಆರ್‌ಎಫ್ ಹಳಿ ತಪ್ಪಿರುವ ಬೋಗಿಗಳ ತೆರವು ಕಾರ್ಯಾಚರಣೆಯಲ್ಲಿ ನಿರತವಾಗಿವೆ.. ಮಾನವ ದೋಷದಿಂದಾಗಿ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳು ಡಿಕ್ಕಿಯಾಗಿರಬಹುದು ಎಂದು ಈಸ್ಟ್ ಕೋಸ್ಟ್ ರೈಲ್ವೇ ಹೇಳಿದೆ.
Also read: ನ.4ರಂದು ಚೆನ್ನೈನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ | ಸಾಧಕರಿಗೆ ಸನ್ಮಾನ | ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post