ಕಲ್ಪ ಮೀಡಿಯಾ ಹೌಸ್ | ಭದ್ರಾವತಿ (ಶಿವಮೊಗ್ಗ) |
ಭದ್ರಾವತಿ (Bhadravati) ನಗರದ ಸೈಲ್-ವಿಐಎಸ್ಎಲ್ (VISL) ಕಾರ್ಖಾನೆಯ ಡಿಜಿಎಂ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೃತರನ್ನು ಗೋವಿಂದರಾಜ್ (51) ಎಂದು ಗುರುತಿಸಲಾಗಿದೆ. ಅವರು ವಿಐಎಸ್ಎಲ್ ಕಾರ್ಖಾನೆಯ ಎಲೆಕ್ಟ್ರಿಕ್ ವಿಭಾಗದಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ (ಡಿಜಿಎಂ) ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಾರ್ಖಾನೆಯ ಅಧಿಕಾರಿಗಳ ಕ್ವಾಟರ್ಸ್‌ನಲ್ಲಿ ವಾಸವಿದ್ದ ಅವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
VISL: 13 ವರ್ಷಗಳಿಂದ ವಿಐಎಸ್ಎಲ್‌ನಲ್ಲಿ ಸೇವೆ
ತಮಿಳುನಾಡಿನ ಸೇಲಂ ಮೂಲದ ಗೋವಿಂದರಾಜ್ ಅವರು ಕಳೆದ 13 ವರ್ಷಗಳಿಂದ ವಿಐಎಸ್ಎಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ಪತ್ನಿ ಹಾಗೂ ಮಕ್ಕಳನ್ನು ಸೇಲಂಗೆ ಕಳುಹಿಸಿದ ಬಳಿಕ ಅವರು ಮತ್ತೆ ಕ್ವಾಟರ್ಸ್‌ಗೆ ವಾಪಸ್ ಬಂದಿದ್ದರು. ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Also Read>> ಉಸಿರಿನ ಗತಿಯಲ್ಲಿದೆ ಜಗತ್ತಿನ ಸಕಲ ಆಗುಹೋಗುಗಳ ರಹಸ್ಯ: ರಾಘವೇಶ್ವರ ಶ್ರೀ
ಆಪ್ತ ಸಹಾಯಕನ ಕರೆ ಬಳಿಕ ಘಟನೆ ಬೆಳಕಿಗೆ
ಸೋಮವಾರ ಬೆಳಗ್ಗೆ ಗೋವಿಂದರಾಜ್ ಅವರ ಆಪ್ತ ಸಹಾಯಕರು ಕರೆ ಮಾಡಿದ್ದು, ಅವರು ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕ್ವಾಟರ್ಸ್‌ಗೆ ತೆರಳಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











