ನವದೆಹಲಿ: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಇನ್ನು ಒಂದು ದಿನ ಮಾತ್ರ ಬಾಕಿಯಿರುವ ಈ ಹಂತದಲ್ಲಿ ಯಾವುದೇ ಕಾರಣಕ್ಕೂ ಮತ ಎಣಿಕೆ ವಿಧಾನದಲ್ಲಿ ಬದಲಾವಣೆ ಮಾಡುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಸ್ಪಷ್ಟನೆ ನೀಡಿರುವ ಆಯೋಗ, ಈ ಕುರಿತಂತೆ ಪ್ರತಿಪಕ್ಷಗಳ ಬೇಡಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮನವಿಯನ್ನು ತಿರಸ್ಕರಿಸಿದೆ.
22 ರಾಜಕೀಯ ಪಕ್ಷಗಳ ನಾಯಕರು ಫಲಿತಾಂಶಕ್ಕೆ ಮುನ್ನ ವಿವಿಪ್ಯಾಟ್ ಸಿಲ್ಪ್’ಗಳನ್ನು ಎಣಿಕೆ ಮಾಡಿ ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ವ್ಯತ್ಯಾಸಗಳೇನಾದರೂ ಕಂಡು ಬಂದರೆ ಅಂತಹಾ ಲೋಕಸಭೆ ಕ್ಷೇತ್ರದ ಎಲ್ಲಾ ಮತಗಳನ್ನು ಸಹ ಮತ್ತೊಮ್ಮೆ ಕ್ರಾಸ್ ಚೆಕ್ ಮಾಡಬೇಕು ಎಂದು ಆಗ್ರಹಿಸಿವೆ
ಆದರೆ, ಈ ವಿಚಾರದಲ್ಲಿ ತನ್ನ ನಿಲುವನ್ನು ಸ್ಪಷ್ಟಪಡಿಸಿರುವ ಆಯೋಗ ಮತ ಎಣಿಕೆಗೆ ಎಲ್ಲ ಸಿದ್ದತೆಗಳೂ ಪೂರ್ಣಗೊಂಡಿರುವೆ. ಈ ಹಂತದಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡುವುದಿಲ್ಲ ಎಂದಿದೆ.
Discussion about this post