ಕಲ್ಪ ಮೀಡಿಯಾ ಹೌಸ್ | ವಡೋದರಾ(ಗುಜರಾತ್) |
ಇಲ್ಲಿನ ವಡೋದರಾ ಜಿಲ್ಲೆಯ ಮುಜ್ಬುರ ಬಳಿಯಲ್ಲಿ ನಾಲ್ಕು ದಶಕಗಳ ಹಿಂದೆ ನಿರ್ಮಾಣವಾದ ಬೃಹತ್ ಸೇತುವೆ ಕುಸಿದು ಬಿದ್ದಿದ್ದು, #Huge Bridge Collapse ಘಟನೆಯಲ್ಲಿ ಸಾವಿಗೀಡಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಇಲ್ಲಿನ ಹಿಮಸಾಗರ್ ನದಿಗೆ ಅಡ್ಡಲಾಗಿ ನಾಲ್ಕು ದಶಕಗಳ ಹಿಂದೆ ಸೇತುವೆ ನಿರ್ಮಾಣವಾಗಿದ್ದು, ಮಧ್ಯ ಗುಜರಾತ್ ಹಾಗೂ ಸೌರಾಷ್ಟ್ರ ಭಾಗಗಳನ್ನು ಇದು ಸಂಪರ್ಕಿಸುತ್ತದೆ.
ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಐವರನ್ನು ರಕ್ಷಿಸಲಾಗಿದೆ. ಎರಡು ಟ್ರಕ್’ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ನದಿಗೆ ಬಿದ್ದಿವೆ. ಕೆಲವೇ ನಿಮಿಷಗಳಲ್ಲಿ, ಗ್ರಾಮಸ್ಥರು ಸುದ್ದಿ ಮುಟ್ಟಿಸಿ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಐವರನ್ನು ರಕ್ಷಿಸಿ ಮೇಲೆತ್ತಿದ್ದಾರೆ.
ಘಟನೆ ಕುರಿತಂತೆ ಅಲ್ಲಿನ ಆರೋಗ್ಯ ಸಚಿವ ಋಷಿಕೇಶ್ ಪಟೇಲ್ ಮಾತನಾಡಿದ್ದು, ಈ ಗಂಭೀರಾ ಸೇತುವೆಯ ಸ್ಲಾö್ಯಬ್ ಕುಸಿದು ಐದಾರು ವಾಹನಗಳು ಮಹಿಸಾಗರ್ ನದಿಗೆ ಬಿದ್ದವು ಎಂದಿದ್ದಾರೆ.
ಸೇತುವೆ ಕುಸಿದಿದ್ದರಿಂದ ಆನಂದ್, ವಡೋದರಾ, ಭರೂಚ್ ಮತ್ತು ಅಂಕಲೇಶ್ವರವನ್ನು ಸೌರಾಷ್ಟ್ರಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಗಳು ಕಡಿದುಹಾಕಿದೆ, ಇದು ಪ್ರಾದೇಶಿಕ ಸಾರಿಗೆ ಮತ್ತು ವಾಣಿಜ್ಯ ಸಾರಿಗೆ ಸಂಚಾರವನ್ನು ನಿಷ್ಕ್ರಿಯಗೊಳಿಸಿದೆ.
ಈ ಸೇತುವೆಯನ್ನು 1985 ರಲ್ಲಿ ನಿರ್ಮಿಸಲಾಗಿದ್ದು, ಅದರ ನಿರ್ವಹಣೆಯನ್ನು ಅಗತ್ಯವಿದ್ದಾಗ ನಿಯತಕಾಲಿಕವಾಗಿ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಆದರೆ ಸ್ಥಳೀಯರು ಹೇಳುವುದೇ ಬೇರೆ. ಗಂಭೀರಾ ಸೇತುವೆ ಬಹಳ ಹಿಂದಿನಿAದಲೂ ಅಪಾಯಕಾರಿ ಶಿಥಿಲಾವಸ್ಥೆಯಲ್ಲಿತ್ತು. ಸ್ಥಳೀಯರು ಅದರ ಶಿಥಿಲಾವಸ್ಥೆಯ ಬಗ್ಗೆ ಪದೇ ಪದೇ ಎಚ್ಚರಿಕೆ ನೀಡಿ ತುರ್ತು ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡುತ್ತಿದ್ದರು, ಆದರೆ ಅವರ ಎಚ್ಚರಿಕೆಗಳನ್ನು ನಿರ್ಲಕ್ಷಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post