ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗವು ಇಂದು ಬೆಂಗಳೂರಿನ ಎಂ.ಜಿ. ರೈಲ್ವೆ ಕಾಲೋನಿಯಲ್ಲಿ ಆಯೋಜಿಸಲಾಗಿದ್ದ ವಾಕಥಾನ್ ಯಶಸ್ವಿಯಾಗಿ ನಡೆಯಿತು.
ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಆಶುತೋಷ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ವಾಕಥಾನ್ ನಡೆಯಿತು.
ವಾಕಥಾನ್ ಆರಂಭದಲ್ಲಿ ಆಶುತೋಷ್ ಕುಮಾರ್ ಸಿಂಗ್ ರವರು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸ್ವಚ್ಛತೆಯ ಪ್ರತಿಜ್ಞೆಯನ್ನು ಬೋಧಿಸಿದರು.
ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಪ್ರವೀಣ್ ಕಾತರಕಿ ಹಾಗೂ ಸಿಬ್ಬಂದಿಗಳು ಈ ವಾಕಥಾನ್ ನಲ್ಲಿ ಉತ್ಸಾಹದಿಂದ ಭಾಗವಹಿಸಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಿದರು.
ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post