ಶಿವಮೊಗ್ಗ: ಸುಮಾರು 10 ವರ್ಷಗಳ ನಂತರ ಮಲೆನಾಡಿನ ಸೊಬಗನ್ನು ಹೆಚ್ಚಿಸಲು ಸಿದ್ದವಾಗಿರುವ ಸಹ್ಯಾದ್ರಿ ಉತ್ಸವ 2019ಕ್ಕೆ ನಾಳೆ ಚಾಲನೆ ದೊರೆಯಲಿದ್ದು, ಇದಕ್ಕಾಗಿ ಸಕಲ ರೀತಿಯಲ್ಲೂ ಸಜ್ಜಾಗಿದೆ.
ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಮಾತನಾಡಿದ್ದು, ಸಿದ್ದಗಂಗಾ ಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಒಂದು ದಿನಗಳ ಕಾಲ ಉತ್ಸವವನ್ನು ಮುಂದೂಡಲಾಗಿದೆ. ಹೀಗಾಗಿ, ಜ.24ರಂದು ಉದ್ಘಾಟನೆ ನಡೆಯಲಿದ್ದು, ಉಳಿದಂತೆ ಎಲ್ಲ ಕಾರ್ಯಕ್ರಮಗಳು ಪೂರ್ವನಿಗದಿಯಂತೆಯೇ ನಡೆಯಲಿದೆ ಎಂದು ತಿಳಿಸಿದ್ದಾರೆ.
ಇನ್ನು, 10 ವರ್ಷಗಳ ನಂತರ ನಡೆಯುತ್ತಿರುವ ಸಹ್ಯಾದ್ರಿ ಉತ್ಸವದಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿ, ಜಿಲ್ಲೆಯ ಸೊಬಗನ್ನು ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ.
Discussion about this post