ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಲೋಕಾರ್ಪಣೆ ದಿನಾಂಕ ಫೆ. 27 ಕ್ಕೆ ನಿಗಡಿಯಾಗಿದ್ದು, ಇದಕ್ಕೆ ರಾಷ್ಟ್ರ ಕವಿ ಕುವೆಂಪು ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರ ಕವಿ ಕುವೆಂಪು ಅವರ ಹೆಸರು ಸೂಕ್ತವಾಗಿದೆ. ಜ್ಞಾನಪೀಠ ಪಡೆದ ಮೊದಲ ಕನ್ನಡಿಗ ಕುವೆಂಪು ಆಗಿದ್ದಾರೆ. ಹಾಗಾಗಿ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಇಡಲು ತೀರ್ಮಾನ ಮಾಡಲಾಗಿದೆ. ಅಧಿವೇಶನದಲ್ಲಿ ತೀರ್ಮಾನವನ್ನು ಸರ್ವಾನುಮತದಿಂದ ನಿರ್ಣಯಿಸಿ ಕೇಂದ್ರಕ್ಕೆ ಕಳುಹಿಸಲಾಗುತ್ತದೆ ಎಂದರು.
Discussion about this post