ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಇಡಿಯ ದೇಶವನ್ನೇ ತಲ್ಲಣಗೊಳಿಸಿದ ಕೊರೋನಾದಿಂದ ತತ್ತರಿಸಿದ ಕಟ್ಟ ಕಡೆಯ ವ್ಯಕ್ತಿಗೂ ಲಸಿಕೆ ತಲುಪಿಸುವುದು ನಮ್ಮ ಸರ್ಕಾರದ ಸಂಕಲ್ಪವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಆರ್’ಎಎಫ್ ಘಟಕಕ್ಕೆ ಭೂಮಿ ಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಕೊರೋನಾದಿಂದಾಗಿ ದೇಶದ ಜನತೆ ಬಹಳಷ್ಟು ಸಂಕಷ್ಟ ಅನುಭವಿಸಿದ್ದಾರೆ. ಈಗ ಲಸಿಕೆ ಹಂಚಿಕೆಯಾಗುತ್ತಿರುವುದು ಸಂತಸದ ವಿಚಾರ ಎಂದರು.
ಆರಂಭದಲ್ಲಿ ಕೊರೋನಾ ವೈರಸ್ ಪರೀಕ್ಷೆಗಾಗಿ ಒಂದೇ ಲ್ಯಾಬ್ ಇತ್ತು. ಈಗ 2000 ಸಾವಿರ ಲ್ಯಾಬ್’ಗಳನ್ನು ಆರಂಭಿಸಲಾಗಿದೆ. ಅಲ್ಲದೇ, ದೇಶದಲ್ಲಿ ಕೊರೋನಾ ಲಸಿಕೆ ಅತಿ ಕಡಿಮೆ ದರದಲ್ಲಿ ಹಂಚಿಕೆಯಾಗುತ್ತಿದ್ದು, ಇದು ವಿಶ್ವದಲ್ಲೇ ಪ್ರಥಮವಾಗಿದೆ ಎಂದರು.
ಈಗ ಲಸಿಕೆಯನ್ನು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ. ಕರ್ನಾಟಕಕ್ಕೆ ಸಂಬಂಧಿಸಿದಂತೆ 14 ಲಕ್ಷ ಡೋಸ್’ಗಳನ್ನು ನೀಡಲಾಗಿದೆ ಎಂದರು.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post