ಕಲ್ಪ ಮೀಡಿಯಾ ಹೌಸ್ | ಪಶ್ಚಿಮ ಬಂಗಾಳ |
ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ Assembly election results of five states ಹೊರಬಿದ್ದಿದ್ದು, ಪಶ್ಚಿಮ ಬಂಗಾಳದಲ್ಲಿ West Bengal ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 200 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಬಿಜೆಪಿ ಹೊಸ ಇತಿಹಾಸವನ್ನು ನಿರ್ಮಿಸಿದೆ.
ಮುಂಜಾನೆ ಆರಂಭಿಕ ಹಂತದಿAದಲೂ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ ಮಧ್ಯಾಹ್ನ ವೇಳೆಗೆ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾ ಬಂದಿದೆ.
ಸಂಜೆ 4.30ರ ವೇಳೆಗೆ 200 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ದಾಖಲೆ ಬರೆದಿದೆ.
ಇನ್ನು, ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಕೇವಲ 88 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಸೋತು ಸುಣ್ಣವಾಗಿದೆ.
ಇದೇ ವೇಳೆ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಹಾಗೂ ಇತರು 2 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆಯಲ್ಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















