ಕಲ್ಪ ಮೀಡಿಯಾ ಹೌಸ್ | ಪಶ್ಚಿಮ ಬಂಗಾಳ (ಬರ್ಡ್ವಾನ್) |
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ CM Mamatha Banerjee ತೆರಳುತ್ತಿದ್ದ ಕಾರು ರಸ್ತೆ ಅಪಘಾತಕ್ಕೀಡಾಗಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಇಂದು ಮಧ್ಯಾಹ್ನ ಬರ್ಡ್ವಾನ್ ಎಂಬಲ್ಲಿ ಮಮತಾ ಬ್ಯಾನರ್ಜಿ ಅವರ ಭದ್ರತಾ ಪಡೆಯ ಕಾರುಗಳ ನುಡುವೆ ಏಕಾಏಕಿ ಬೇರೊಂದು ಕಾರು ನುಗ್ಗಿದ ಪರಿಣಾಮ ಅಪಘಾತ ಸಂಭವಿಸಿದೆ. ಕಾರು ಏಕಾಏಕಿ ನುಗ್ಗಿದ ಪರಿಣಾಮ ಮಮತಾ ಬ್ಯಾನರ್ಜಿ ಕಾರು ಚಾಲಕ ಎಮರ್ಜೆನ್ಸಿ ಬ್ರೇಕ್ ಬಳಸಿದ್ದರಿಂದಾಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
Also read: ಜ. 26, 27ರಂದು ಶ್ರೀ ತ್ಯಾಗರಾಜ, ಶ್ರೀ ಪುರಂದರ ಆರಾಧನಾ ಉತ್ಸವ
ಬರ್ಡ್ವಾನ್ನಲ್ಲಿ ಅಧಿಕೃತ ಕಾರ್ಯಕ್ರಮ ಮುಗಿಸಿಕೊಂಡು ಮಮತಾ ಬ್ಯಾನರ್ಜಿ ರಸ್ತೆ ಮೂಲಕ ಕೋಲ್ಕತ್ತಾಗೆ ಮರಳುತ್ತಿದ್ದರು. ಈ ಭಾಗದಲ್ಲಿ ದಟ್ಟ ಮಂಜು ಆವರಿಸಿದ್ದ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಬೇರೊಂದು ಕಾರು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post