No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳೇನು? ಮುಖ್ಯಮಂತ್ರಿಗಳು ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 9, 2020
in ಬೆಂಗಳೂರು ನಗರ
0
ಪ್ರತಿಪಕ್ಷ ನಾಯಕರ ಜೊತೆ ದೂರವಾಣಿ ಮೂಲಕ ಸಿಎಂ ಬಿಎಸ್’ವೈ ಮಾತನಾಡಿದ್ದೇನು?

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಇಂದು ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಡೆದಿದ್ದು, ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿ ನಡೆಸಿದ್ದು, ಈಗಾಗಲೇ ಮಳೆ ಪ್ರಾರಂಭವಾಗಿದ್ದು ರಾಜ್ಯದಲ್ಲಿ ಎಲ್ಲಿಯೂ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರಗಳ ಕೊರತೆ ಆಗದಂತೆ ಕ್ರಮವಹಿಸಿ ಸರಿಯಾದ ರೀತಿಯಲ್ಲಿ ವಿತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚಿಸಲಾಗಿದೆ ಎಂದರು.

ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಭತ್ತದ ಬೆಳೆಯ ಹಾನಿಯಾಗಿದ್ದು ಈ ಬಗ್ಗೆ ಕೃಷಿ ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ವಾಸ್ತವಿಕ ಬೆಳೆಹಾನಿಯ ಬಗ್ಗೆ ವರದಿಯನ್ನು ನೀಡುವಂತೆ ಸೂಚಿಸಲಾಗಿದೆ ಎಂದಿದ್ದಾರೆ.

ಹೊಲದಲ್ಲಿ ಬೆಳೆದಿರುವ ಹೂ ಗಳು ಮಳೆಯಿಂದ ಹಾನಿಯಾಗಿದ್ದು ಈ ಬಗ್ಗೆಯೂ ಜಿಲ್ಲಾಧಿಕಾರಿಯವರಿಂದ ವರದಿಯನ್ನು ಪಡೆದು ಸೂಕ್ತ ಪರಿಹಾರ ನೀಡುವ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಡಿತರ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ನಡೆಸಲು ಸೂಚಿಸಲಾಗಿದೆ. ಈಗಾಗಲೇ ಶೇಕಡಾ 50ರಷ್ಟು ಪಡಿತರ ವಿತರಣೆಯನ್ನು ಮಾಡಲಾಗಿದ್ದು, ಇನ್ನುಳಿದ ಪಡಿತರ ವಿತರಣೆಯನ್ನು ಇನ್ನು ಎರಡು ಮೂರು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತೀರ್ಮಾನಿಸಲಾಗಿದೆ ಎಂದರು.

ಕೇಂದ್ರ ಸರ್ಕಾರದ ಪಡಿತರ ವ್ಯವಸ್ಥೆಯನ್ನು ಕೂಡಲೇ ವಿತರಿಸಲಾಗುವುದು. ಎರಡುವರೆ ಲಕ್ಷ ಕುಟುಂಬದವರಿಗೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದರೂ ವಿವಿಧ ಕಾರಣಗಳಿಗೆ ಸಿಕ್ಕಿಲ್ಲವೆಂದು ದೂರು ಬಂದಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಹಾಗೂ ಸದ್ಯ ಅವರಿಗೆ ತಾತ್ಕಾಲಿಕವಾಗಿ ಪಡಿತರ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್ -19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಇನ್ನು 15 ದಿನಗಳವರೆಗೆ ಲಾಕ್‌ಡೌನ್ ಮುಂದುವರೆಸಬೇಕು ಎನ್ನುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಧಾನಮಂತ್ರಿಯವರೊಂದಿಗೆ ಎಪ್ರಿಲ್ 11ರಂದು ನಡೆಯುವ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಈ ಕೆಳಗಿನಂತಿವೆ:

  • ಶಾಸಕರು ಹಾಗೂ ಸಚಿವರ ವೇತನದಲ್ಲಿ ಶೇ.30 ರಷ್ಟು ಕಡಿತಗೊಳಿಸಲು ನಿರ್ಧಾರ. ಇದರಿಂದ ಉಳಿತಾಯವಾಗುವ 15 ಕೋಟಿ 36 ಲಕ್ಷಕ್ಕೂ ಹೆಚ್ಚಿನ ಹಣ ಕೊರೊನಾ ನಿಧಿಗೆ ನೀಡಲು ತೀರ್ಮಾನ. ಸುಗ್ರೀವಾಜ್ಞೆ ಮೂಲಕ ಈ ಆದೇಶ ಜಾರಿ.
  • ಜಿಎಸ್’ಟಿ ಪಾವತಿ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ. ಸಂಕಷ್ಟದಲ್ಲಿರುವ ಹೂವು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವ ಸಂಬಂಧ ಸಮೀಕ್ಷೆ ನಡೆಸಿ ತೀರ್ಮಾನ ಮಾಡಲಾಗುವುದು.
  • ಕುಡಿಯುವ ನೀರಿಗಾಗಿ 49 ಬರಪೀಡಿತ ತಾಲೂಕುಗಳಿಗೆ ತಲಾ 1 ಕೋಟಿ ಹಾಗೂ ಗ್ರಾಮೀಣ ಪಟ್ಟಣ ಪಂಚಾಯಿತಿಗಳಿಗೆ 50 ಲಕ್ಷ ರೂ. ಬಿಡುಗಡೆ ಮಾಡಲು ತೀರ್ಮಾನ.
  • ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ಬಾಕಿ ಇದ್ದವರಿಗೂ ಪಡಿತರ ನೀಡಲು ನಿರ್ಧಾರ.
  • ಕರ್ನಾಟಕ ವಿಧಾನಮಂಡಲದ ವೇತನಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ಆಧ್ಯಾದೇಶ 2020ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
  • ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) 2020ಕ್ಕೆ ಅನುಮೋದನೆ ನೀಡಲಾಯಿತು.
  • ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ಆಧ್ಯಾದೇಶ 2020ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: Cabinet MeetingCM B S YediyurappaCoronavirusCovid_19indiaKannadaNewsWebsiteKoppalLatestNewsKannadaಕರ್ನಾಟಕ ವಿಧಾನಮಂಡಲಕೊರೋನಾ ವೈರಸ್ಕೋವಿಡ್-19ಸಚಿವ ಸಂಪುಟ ಸಭೆ
Share202Tweet123Send
Previous Post

ಕಿರ್ಲೋಸ್ಕರ್ ಹಾಗೂ ಸರ್ವೋದಯ ಟ್ರಸ್ಟ್‌ ವತಿಯಿಂದ ಬಡ ಕುಟುಂಬಕ್ಕೆ ಪಡಿತರ ವಿತರಣೆ

Next Post

ಕೋವಿಡ್ ಸೋಂಕಿನಷ್ಟೇ ಭಯಾನಕ ಸಮಾಜ ಸೇವೆ ಎನ್ನುವ ಹೆಸರಿನಲ್ಲಿ ನಡೆಯುವ ವ್ಯಾಪಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್ ಸೋಂಕಿನಷ್ಟೇ ಭಯಾನಕ ಸಮಾಜ ಸೇವೆ ಎನ್ನುವ ಹೆಸರಿನಲ್ಲಿ ನಡೆಯುವ ವ್ಯಾಪಾರ

ಕೋವಿಡ್ ಸೋಂಕಿನಷ್ಟೇ ಭಯಾನಕ ಸಮಾಜ ಸೇವೆ ಎನ್ನುವ ಹೆಸರಿನಲ್ಲಿ ನಡೆಯುವ ವ್ಯಾಪಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

April 18, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಗಂಟಲಲ್ಲಿ ಆಹಾರ ಸಿಲುಕಿಕೊಂಡು ಯುವಕ ಸಾವು

April 18, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL