ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿ ಮತ್ತೆ ಅಧಿಕಾರ ಹಿಡಿಯಬೇಕು ಎಂಬ ಕನಸು ಕಾಣುತ್ತಿರುವ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ವರ್ಷದಿಂದ ತಯಾರಿ ನಡೆಸಿತ್ತು ಎಂದು ವರದಿಯಾಗಿದೆ.
ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಈಗ ನಾವು ನೀಡಿರುವ ಭರವಸೆಗಳು ಸತ್ಯವಾಗಿಯೇ ಇರುತ್ತವೆ ಹಾಗೂ ನಾವು ಅಧಿಕಾರಕ್ಕೆ ಬಂದರೆ ಎಲ್ಲವನ್ನೂ ಈಡೇರಿಸುತ್ತೇವೆ ಎಂದಿದ್ದಾರೆ. ಪ್ರಮುಖವಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಧಿಕಾರಕ್ಕೆ ಬಂದ ಮೊದಲ ದಿನವೇ ರಫೇಲ್ ಹಗರಣದ ತನಿಖೆ ಪ್ರಾರಂಭಿಸುತ್ತೇವೆ ಎಂದಿದ್ದಾರೆ.
ಹೀಗಿವೆ ಪ್ರಣಾಳಿಕೆಯ ಅಂಶಗಳು:
- ಸಾಲ ಮರುಪಾವತಿ ಮಾಡದ ರೈತರ ವಿರುದ್ಧ ಪ್ರಕರಣವಿಲ್ಲ ಹಾಗೂ ಕ್ರಿಮಿನಲ್ ಅಪರಾಧವಾಗುವುದಿಲ್ಲ
- ಬಡತನ ತೊಲಗಿಸಲು ದೇಶದ ಶೇ. 20ರಷ್ಟು ಅತಿ ಬಡ ಕುಟುಂಬಗಳಿಗೆ ವರ್ಷಕ್ಕೆ 72 ಸಾವಿರ ರೂ. ನೀಡುವುದು
- ಖಾಲಿ ಇರುವ 22 ಲಕ್ಷ ಸರ್ಕಾರಿ ಉದ್ಯೋಗಗಳ ಭರ್ತಿ
- ಪಂಚಾಯತಿಗಳಲ್ಲಿ 10 ಲಕ್ಷ ಉದ್ಯೋಗಗಳ ಭರ್ತಿ
- ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕನಿಷ್ಠ ಕೆಲಸ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಳ
- ಜಿಡಿಪಿಯಲ್ಲಿ ಶೇ. 6ರಷ್ಟು ಹಣ ಶಿಕ್ಷಣಕ್ಕೆ ಮೀಸಲು
- ಖಾಸಗಿ ಇನ್ಷೂರೆನ್ಸ್ ಕಂಪನಿಗಳಿಗೆ ತಿಲಾಂಜಲಿ
- ಜಿಎಸ್‌ಟಿಯನ್ನು ಸರಳಗೊಳಿಸಿ, ಎರಡು ಹಂತದ ಜಿಎಸ್‌ಟಿ ತೆರಿಗೆ ಮಾತ್ರ
- ಮಾನಹಾನಿ ಪ್ರಕರಣವನ್ನು ಅಪರಾಧ ಕೃತ್ಯ ಎಂದು ಪರಿಗಣಿಸುವ ಐಪಿಸಿ ಸೆಕ್ಷನ್ 499 ರದ್ದು
- ರಾಷ್ಟ್ರದ್ರೋಹ ವಿಚಾರದಲ್ಲಿರುವ ಐಪಿಸಿ ಸೆಕ್ಷನ್ 124ಎ ಅನ್ನು ರದ್ದು
- ರೈತರಿಗೆ ಪ್ರತ್ಯೇಕ ಕಿಸಾನ್ ಬಜೆಟ್ ಮಂಡನೆ
- ಶಿಕ್ಷಣಕ್ಕೆ ಬಜೆಟ್ ನಲ್ಲಿ ಶೇಕಡಾ 6ರಷ್ಟು ಮೀಸಲು
- ಸರ್ಕಾರಿ ಆಸ್ಪತ್ರೆಗಳನ್ನು ಬಲವರ್ಧನೆಗೆ ಕ್ರಮ
- ದೇಶದ ಭದ್ರತೆಗಾಗಿ ಮಹತ್ವದ ಕ್ರಮಗಳು
- ದಕ್ಷಿಣ ಭಾರತದ ಅಭಿವೃದ್ಧಿಗೆ ಯೋಜನೆಗಳು
- ಉದ್ಯೋಗ ಸೃಷ್ಠಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು
- ಆರೋಗ್ಯ ವಲಯಕ್ಕೆ ಆದ್ಯತೆ
- ದೇಶದ ಆರ್ಥಿಕ ಬೆಳವಣಿಗೆಗೆ ಒತ್ತು
Discussion about this post