ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ರಾಜಧಾನಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದಾಸ ಶ್ರೇಷ್ಠ ಕನಕದಾಸರು ಹಾಗೂ ವಾಲ್ಮೀಕಿ ಅವರುಗಳ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.
ನವದೆಹಲಿಯಿಂದ ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯವರು ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದರು.
ವಿಧಾನಸೌಧದ ಆವರಣದಲ್ಲಿರುವ ಮಹರ್ಷಿ ವಾಲ್ಮೀಕಿ ಹಾಗೂ ಕನಕದಾಸರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
ಈ ವೇಳೆ ಟ್ವೀಟ್ ಮಾಡಿರುವ ಅವರು, ಇಂದು ಕನಕದಾಸರ ಜಯಂತಿಯ ಶುಭ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಶ್ರೀ ಕನಕದಾಸರಿಗೆ ಗೌರವ ನಮನ ಸಲ್ಲಿಸಿದೆ. ಭಕ್ತಿಯ ಮಾರ್ಗವನ್ನು ತೋರಿಸಿ, ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿ, ಸಾಮಾಜಿಕ ಏಕತೆಯ ಸಂದೇಶವನ್ನು ಸಾರಿದ ಸಂತ ಕನಕದಾಸರಿಗೆ ನಾವು ಸದಾ ಚಿರಋಣಿಗಳಾಗಿರುತ್ತೇವೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post