ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಮಾನ್ಯತೆ ಪಡೆದಿರುವ ಪತ್ರಕರ್ತರಿಗೆ `ಸಂಜೀವಿನಿ’ ಎಂಬ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಪ್ರಸಕ್ತ ಸಾಲಿನ ಆಯವ್ಯಯ ಭಾಷಣದಲ್ಲಿ ಈ ಕುರಿತಂತೆ ಘೋಷಣೆ ಮಾಡಿರುವ ಅವರು, ರಾಜ್ಯದಲ್ಲಿ ಮಾನ್ಯತೆ ಪಡೆದಿರುವ ಪತ್ರಕರ್ತರಿಗೆ ಅನ್ವಯವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
Also Read>> ಬಿಸಿ ಊಟ ನೌಕಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ | ವಾರಕ್ಕೆ 5 ದಿನ ಶಾಲಾ ಮಕ್ಕಳಿಗೆ ಈ ಆಹಾರ ಪೂರೈಕೆ
ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಮಾನ್ಯತೆ ಪಡೆದ ಪತ್ರಕರ್ತರಿಗೆ 5 ಲಕ್ಷ ರೂ.ವರೆಗಿನ ಉಚಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮಾಧ್ಯಮ ಮಾನ್ಯತೆ ಪಡೆದಿರುವ 2500 ಪತ್ರಕರ್ತರು ಹಾಗೂ ಅವರ ಕುಟುಂಬಸ್ಥರಿಗೆ ಈ ಉಚಿತ ಚಿಕಿತ್ಸೆ ಯೋಜನೆ ಅನ್ವಯವಾಗಲಿದೆ.
ನಗದು ರಹಿತ ಚಿಕಿತ್ಸೆ ಇದಾಗಿದ್ದು, `ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಎಂಬ ಯೋಜನೆಯ ಅಡಿಯಲ್ಲಿ ಇದು ಜಾರಿಯಾಗಲಿದೆ.
ಅಲ್ಲದೇ, ಈವರೆಗೂ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುತ್ತಿರುವ ಮಾಶಾಸನವನ್ನು 12 ಸಾವಿರರಿಂದ 15 ಸಾವಿರಕ್ಕೆ ಹಾಗೂ ಕುಟುಂಬ ಮಾಶಾಸನವನ್ನು 6000ರಿಂದ 7500 ರೂ.ಗಳಿಗೆ ಏರಿಕೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post