No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-14-15 ವಾಮನ ಪುರಾಣ-ಕೂರ್ಮ ಪುರಾಣ

kalpa News by kalpa News
April 10, 2020
in ಡಾ.ಗುರುರಾಜ ಪೋಶೆಟ್ಟಿಹಳ್ಳಿ
0
18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-14-15 ವಾಮನ ಪುರಾಣ-ಕೂರ್ಮ ಪುರಾಣ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ವಾಮನ ಪುರಾಣ
ವಿಷ್ಣುವಿನ ವಾಮನಾವತಾರ ಇದರ ಆರಂಭ ವಸ್ತು. ಪುರಾಣ ಪಂಚಲಕ್ಷಣಸಂಪನ್ನವಾಗಿಲ್ಲ. ಹಲವಾರು ಅಧ್ಯಾಯಗಳು ವಿಷ್ಣುವಿನ ಅವತಾರಗಳನ್ನು ವಿವರಿಸುತ್ತವೆ. ಒಂದೆಡೆ ಲಿಂಗಪೂಜೆಯೂ ಮತ್ತೊಂದೆಡೆ ಉಮಾಶಿವರ ವಿವಾಹ, ಗಣೇಶ, ಸ್ಕಂದರ ಉತ್ಪತ್ತಿ ಮುಂತಾದ ಸಂಗತಿಗಳೂ ಬಿತ್ತರಿಸಲ್ಪಟ್ಟಿವೆ. ಶ್ಲೋಕಸಂಖ್ಯೆ ಸುಮಾರು 7,000; ಇದರಲ್ಲಿ 10,000 ಶ್ಲೋಕಗಳಿದ್ದುವೆಂದು ಹಳೆಯ ಪ್ರಸಿದ್ಧಿ, ಕಾಲ ಸುಮಾರು 16ನೆಯ ಶತಮಾನ. ಪಂಚಲಕ್ಷಣಗಳಿಂದ ಕೂಡಿದ್ದಾಗಿರಬಹುದಾದ ಇದರ ಪ್ರಾಚೀನ ಮೂಲ ಎಲ್ಲಿಯೂ ಸಿಕ್ಕಿಲ್ಲ. ಉಪಲಬ್ಧ ಪ್ರತಿ ವಿಷ್ಣು ಶಿವರಿಗೆ ಸಮಾನಪ್ರಾಧಾನ್ಯವನ್ನೀಯುತ್ತದೆ.

ಕೂರ್ಮ ಪುರಾಣ
ಇದರಲ್ಲಿ ಬ್ರಾಹ್ಮೀ, ಭಾಗವತೀ, ಸೌರೀ ಮತ್ತು ವೈಷ್ಣವೀ ಎಂಬ ನಾಲ್ಕು ಸಂಹಿತೆಗಳಿವೆ ಎಂದು ಪುರಾಣವೇ ಹೇಳಿದರೂ ಲಭ್ಯವಾಗಿರುವುದು ಮೊದಲನೆಯ ಸಂಹಿತೆಯೊಂದೇ. ಸಮುದ್ರಮಥನ ಸಂದರ್ಭದಲ್ಲಿ ಮಂದರಗಿರಿಯನ್ನು ಹೊತ್ತ ವಿಷ್ಣುವಿನ ಕೂರ್ಮಾವತಾರದ ಸ್ತೋತ್ರದೊಂದಿಗೆ ಪ್ರಸ್ತುತ ಪುರಾಣ ಆರಂಭವಾಗುತ್ತದೆ. ಆಗ ಕಡಲಿಂದೆದ್ದು ಬಂದ ಲಕ್ಷ್ಮಿ ವಿಷ್ಣುಪತ್ನಿಯಾಗುತ್ತಾಳೆ.

ಇಂದ್ರದ್ಯುಮ್ನನೆಂಬ ದೊರೆ ಬ್ರಾಹ್ಮಣನಾಗಿ ಜನಿಸಿ, ಲಕ್ಷ್ಮಿಯಿಂದ ಉಪದೇಶಪಡೆದು, ಸರ್ವಚರಾಚರಗಳ ಸರ್ಗ, ಸ್ಥಿತಿ, ಪ್ರಲಯ ಕಾರಣನೆಂದು ಆರಾಧಿಸಿ, ಕೂರ್ಮಾವತಾರದ ಮೂಲಕ ಕೂರ್ಮಪುರಾಣವನ್ನು ಅರಿತುಕೊಳ್ಳುತ್ತಾನೆ. ಹರಸರ್ವೋತ್ತಮತ್ವವನ್ನೂ ತ್ರಿಮೂರ್ತಿಗಳ ಐಕ್ಯವನ್ನೂ ಪ್ರಸ್ತುತಪುರಾಣ ಪ್ರತಿಪಾದಿಸುತ್ತದೆ. ಹರನ ಶಕ್ತಿಯ 8,000 ಹೆಸರುಗಳಿಲ್ಲಿ ಬಂದಿವೆ.

ಹರಿಹರರೊಂದು, ಲಕ್ಷ್ಮೀ ಪಾರ್ವತಿಯರೊಂದು ಎಂದು ಹೇಳಿದರೂ ವಿಷ್ಣುವಿನ ಅವತಾರವೆನ್ನಿಸಿದ ಕೃಷ್ಣ ತನ್ನ ಪತ್ನಿಯಾದ ಜಾಂಬವತಿಯಲ್ಲಿ ಮಗನನ್ನು ಪಡೆಯಬೇಕಾದರೆ ಕಠಿನ ತಪವನ್ನೆಸಗಿ, ಶಿವಾನುಗ್ರಹವನ್ನು ಪಡೆಯಬೇಕಾಯಿತು-ಎಂದು ಹೇಳಿರುವುದು ಹರ ಪಕ್ಷಪಾತಕ್ಕೆ ಪ್ರಮಾಣ. ಕೂರ್ಮಪುರಾಣ ಪಂಚಲಕ್ಷಣಗಳಿಂದ ಕೂಡಿದೆ. ವಿಷ್ಣುವಿನ ಕೆಲ ಅವತಾರಗಳನ್ನಿಲ್ಲಿ ಹೇಳಿದರೂ ಒಂದು ಇಡೀ ಅಧ್ಯಾಯ ಶಿವಾವತಾರಗಳ ವರ್ಣನೆಗೇ ಮುಡಿಪಾಗಿದೆ.

ಕಾಶೀ ಪ್ರಯಾಗ ಮಾಹಾತ್ಮ್ಯಗಳಲ್ಲದೆ, ಭಗವದ್ಗೀತೆಗೆ ಸರಿದೊರೆಯಾದ ಈಶ್ವರಗೀತೆಯೂ ಬಂದಿರುವುದು ಈ ಪುರಾಣದ ವೈಶಿಷ್ಟ್ಯ. ಅನಂತರ ವ್ಯಾಸಗೀತೆ, ಪ್ರಾಯಶ್ಚಿತ ವಿಧಿ, ಪಾತಿವ್ರತ್ಯಪ್ರಶಂಸೆ ಮುಂತಾದ ವಿಷಯಗಳು ಬರುತ್ತವೆ. ರಾಮಾಯಣದಲ್ಲಿಲ್ಲದ ಸೀತಾವೃತ್ತಾಂತವೊಂದಿಲ್ಲಿ ಪಾತಿವ್ರತ್ಯ ಮಾಹಾತ್ಮ್ಯವನ್ನು ನಿದರ್ಶಿಸುತ್ತದೆ. ಇಲ್ಲಿ ರಾವಣನ ಕೈಯಿಂದ ಸೀತೆಯನ್ನು ಅಗ್ನಿಯೇ ಬಿಡಿಸಿ ಕಾಪಾಡುತ್ತಾನೆ.

ಇದರಲ್ಲಿ 17,000, ಶ್ಲೋಕಗಳಿದ್ದ ವೆಂದು ಪ್ರಸಿದ್ಧಿ; 6,000 ಶ್ಲೋಕಗಳನ್ನು ಮಾತ್ರ ಉಪಲಬ್ಧ ಪ್ರತಿಯಲ್ಲಿ ಕಾಣಬಹುದು. ಇದರ ಏಳನೆಯ ಅಧ್ಯಾಯದಲ್ಲಿ ಬರುವ ಸೃಷ್ಟಿ ವಿವರಣೆ ವ್ಯಾಹತವಾಗಿರುವುದರಿಂದ ಒಂದಕ್ಕಿಂತ ಹೆಚ್ಚು ಪೌರಾಣಿಕರ ಕೈವಾಡದಿಂದ ಇದು ರಚಿತವಾಯಿತೆಂಬುದನ್ನು ನಿರ್ಧರಿಸಬಹುದು. ಮಹಾಭಾರತದ ಸೃಷ್ಟಿ ವಿವರಣೆಯನ್ನು ಪ್ರಸ್ತುತ ಪುರಾಣ ಸ್ಪಷ್ಟವಾಗಿ ಅನುಸರಿಸಿರುವುದರಿಂದಲೂ ಮತ್ಸ್ಯಪುರಾಣಕ್ಕೆ ಗೊತ್ತಿಲ್ಲದಿದ್ದ ಮಹಾಪುರಾಣಗಳ ಹದಿನೆಂಟನ್ನಿದು ಉಲ್ಲೇಖಿಸುವುದರಿಂದಲೂ ಇದರ ಪ್ರಸ್ತುತರೂಪದ ಕಾಲ ಕ್ರಿಶ 650ಕ್ಕೂ ಈಚಿನದೆನ್ನಬಹುದು. ಕೂರ್ಮಪುರಾಣದ ಪ್ರಕಾರ ದೇವರು ಅವ್ಯಕ್ತ, ಅಜ್ಞೇಯ, ನಿತ್ಯ, ಜಗತ್ಕಾರಣ, ಸದಸದಾತ್ಮಕ, ಪ್ರಕೃತಿಯಿಂದ ಅಭಿನ್ನ, ಸರ್ವನಿರ್ದೇಶಕ, ಗುಣತ್ರಯದ ಸಾಮ್ಯಾವಸ್ಥೆಯಲ್ಲದವ ಪರಬ್ರಹ್ಮ, ಪುರುಷಗರ್ಭ.

ಇದು ಅವನ ಪ್ರಾಕೃತಪ್ರಲಯ ಸ್ಥಿತಿ. ಇಲ್ಲಿಂದ ಮುಂದೆ ಅವನು ಪ್ರಕೃತಿ, ಪುರುಷರಲ್ಲಿ ದೇವತ್ವಪ್ರಕಟಣೆಗಾಗಿ ಪ್ರವೇಶಿಸಿದಾಗ ಜಗತ್ಸೃಷ್ಟಿಗಾರಂಭ. ದೇವರು ಪ್ರಕೃತಿಯಾಗಿ ನಡೆದುಕೊಳ್ಳುವುದೆಂದರೆ ಸಂಕೋಚ ವಿಕಾಸಶೀಲನಾಗುವುದೆಂದರ್ಥ. ಪ್ರಧಾನ ಪುರುಷಾತ್ಮಕವಾದ ಮಹತ್ ಕಾರಣವೆಂಬುದು ಅವನ ಆದ್ಯಸೃಷ್ಟಿ.

ಅದರಿಂದ ಮಹತ್, ಆತ್ಮ, ಮತಿ, ಬ್ರಹ್ಮ, ಪ್ರಬುದ್ಧಿ, ಖ್ಯಾತಿ, ಈಶ್ವರ, ಪ್ರಜ್ಞೆ, ಧೃತಿ, ಸ್ಮೃತಿ, ಅಥವಾ ಸಂವಿತ್ ಎಂಬ ಪದಾರ್ಥ ಹುಟ್ಟುತ್ತದೆ. ಹೀಗೆ ವಿವಿಧ ನಾಮಗಳುಳ್ಳ ಈ ಮಹತ್ತಿನಿಂದ ವೈಕಾರಿಕ, ತೈಜಸ ಮತ್ತು ಭೂತಾದಿ ಎಂಬ ಅಹಂಕಾರತ್ರಯ ಉದಯಿಸುತ್ತದೆ. ಈ ತ್ರಿವಿಧಾಹಂಕಾರಕ್ಕೆ ಅಭಿಮಾನ, ಕರ್ತ, ಮಂತ, ಆತ್ಮ, ಎಂಬ ಹೆಸರುಗಳಿವೆ.


Get in Touch With Us info@kalpa.news Whatsapp: 9481252093

Tags: 18 Puranas18 ಪುರಾಣDr Gururaj PoshettihalliKannadaNewsWebsiteKurma PuranaLatestNewsKannadaSpecial ArticleVamana Puranaಕೂರ್ಮ ಪುರಾಣಡಾ.ಗುರುರಾಜ ಪೋಶೆಟ್ಟಿಹಳ್ಳಿವಾಮನ ಪುರಾಣ
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ ತಾಲೂಕಿನಲ್ಲಿ ಸಿಡಿಲಿಗೆ ಹೊತ್ತಿ ಉರಿದ ಬೃಹತ್ ತೆಂಗಿನ ಮರ

Next Post

ಪ್ರಕೃತಿಯೇ ಕಲಿಸಿದ ಪಾಠ ಕೊರೋನಾದಿಂದಲೂ ಪಾಠ ಕಲಿಯದಿದ್ದರೆ, ಯಮನ ಪಾಶ ಬಿಗಿಯಾಗುವುದು ಅರಿಯಿರಿ

kalpa News

kalpa News

Next Post

ಪ್ರಕೃತಿಯೇ ಕಲಿಸಿದ ಪಾಠ ಕೊರೋನಾದಿಂದಲೂ ಪಾಠ ಕಲಿಯದಿದ್ದರೆ, ಯಮನ ಪಾಶ ಬಿಗಿಯಾಗುವುದು ಅರಿಯಿರಿ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL