ಮಂಗಳೂರು: ಇಲ್ಲಿಗೆ ಬಂದು ಪ್ರಚಾರ ಮಾಡುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಏನು ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಿದರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ್ದು, ಮಂಗಳೂರಿಗೆ ಮೋದಿ ಏನು ಮಾಡಿದ್ದಾರೆ? ಅವರು ಇಲ್ಲಿನ ಸಮಸ್ಯೆಗಳನ್ನೆಲ್ಲಾ ಮುಚ್ಚಿ ಹಾಕಿದ್ದಾರೆ. ಇಷ್ಟಾಗಿ ಅವರು ಮಂಗಳೂರಿಗೆ ಬಂದು ನೀಡುವ ಸಂದೇಶವೇನು? ಎಂದು ಪ್ರಶ್ನಿಸಿದರು.
ಬಿಜೆಪಿಯವರು ನಳಿನ್ ಮುಖ ನೋಡಬೇಡಿ, ಮೋದಿ ಮುಖ ನೋಡಿ ಮತ ಹಾಕಿ ಎನ್ನುತ್ತಿದ್ದು, ಅಷ್ಟಕ್ಕೂ ಮೋದಿ ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದ ಕೊಡುಗೆ ಏನು? ಅವರು ಪ್ರಶ್ನಿಸಿದ್ದಾರೆ.
ವಿಜಯಾ ಬ್ಯಾಂಕನ್ನು ಗುಜರಾತ್ ಮೂಲದ ಬ್ಯಾಂಕ್’ನೊಂದಿಗೆ ವಿಲೀನಗೊಳಿಸಿರುವ ಮೋದಿ, ಮಂಗಳೂರಿನ ಜನರ ಸ್ವಾಭಿಮಾನವನ್ನು ಕೆಣಕಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
Discussion about this post