Thursday, July 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಲೋಕಸಭಾ ಚುನಾವಣೆಯ ಬಜೆಟ್ ಮಂಡಿಸಿದ ಕುಮಾರಸ್ವಾಮಿ ಕೊಟ್ಟಿದ್ದೇನು?

February 8, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 3 minutes

ಬೆಂಗಳೂರು: ಬಿಜೆಪಿಯ ವಿರೋಧ, ಗಲಾಟೆ, ಗದ್ದಲದ ನಡುವೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ರಾಜ್ಯ ಬಜೆಟ್ ಮಂಡಿಸಿದ್ದು, ಲೋಕಸಭಾ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಸಿದ್ದಪಡಿಸಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ.

ಅಲ್ಲದೇ ರಾಜ್ಯ ರಾಜಕೀಯ ಡೋಲಾಯಮಾನ ಸ್ಥಿತಿಯಲ್ಲಿರುವ ನಡುವೆಯೇ, ಕೃಷಿ, ಪಶುಸಂಗೋಪನೆ, ನೀರಾವರಿ, ಅಸಂಘಟಿತ ವಲಯಕ್ಕೆ ಆದ್ಯತೆ, ಮಠ ಮಂದಿರಗಳಿಗೂ ಕೋಟ್ಯಂತರ ರೂಪಾಯಿ ಅನುದಾನ ಪ್ರಕಟಿಸಿದ್ದು, ಇಡಿಯ ಬಜೆಟ್’ನಲ್ಲಿ ಹಳೆ ಮೈಸೂರು ಭಾಗವನ್ನು ವಿಶೇಷವಾಗಿ ಪರಿಗಣಿಸಿದ್ದಾರೆ.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ವಿಧಾನಸಭೆಯಲ್ಲಿ 2019-20ನೇ ಸಾಲಿನ ಆಯ-ವ್ಯಯ ಪತ್ರವನ್ನು ಮಂಡಿಸಿದರು. pic.twitter.com/tqe6EJPTSj

— CM of Karnataka (@CMofKarnataka) February 8, 2019

ಬಜೆಟ್’ನಲ್ಲಿ ಕುಮಾರಸ್ವಾಮಿ ಕೊಟ್ಟಿದ್ದೇನು?
  • ರೈತರ ಸಾಲ ಮನ್ನಾ, ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ ಅನುದಾನ ಹಂಚಿಕೆ ಮಾಡಿದ್ದಾರೆ. ಆದರೆ, ಹಳೇ ಮೈಸೂರು ಭಾಗಕ್ಕೆ ಹೆಚ್ಚಿನ ಆದ್ಯತೆ ಕೊಟ್ಟು, ಉತ್ತರ ಕರ್ನಾಟಕವನ್ನು ಕಡೆಗಣಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
  • ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಕ್ಷೇತ್ರಕ್ಕೆ ಈ ಸಾಲಿನ ಮುಂಗಡ ಪತ್ರದಲ್ಲಿ 46 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದ್ದು, ಇದರಲ್ಲಿ ಹಳೆ ಮೈಸೂರು ಭಾಗಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಣೆ ಹಾಕಲಾಗಿದೆ.
  • ರಾಜ್ಯದಲ್ಲಿ ಮೈತ್ರಿ ಸರ್ಕಾರ ನಡೆಯುತ್ತಿದ್ದರೂ, ಈ ಹಿಂದೆ ಸಿದ್ದರಾಮಯ್ಯ ಘೋಷಣೆ ಮಾಡಿದ್ದ ಕೆಲವು ಯೋಜನೆಗಳನ್ನು ಕಡೆಗಣಿಸಿರುವ ಆರೋಪಗಳು ಕೇಳಿಬಂದಿದೆ. ಒಟ್ಟಾರೆ, 2.34 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿದೆ.
  • ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಅತಿ ಮುಖ್ಯ ಎನ್ನಿಸಿಕೊಂಡ ಸಾಲ ಮನ್ನಾ ಯೋಜನೆಗೆ ಈ ಸಾಲಿನ ಮುಂಗಡ ಪತ್ರದಲ್ಲಿ 12,650 ಕೋಟಿ ರೂ. ನಿಗದಿಪಡಿಸಲಾಗಿದೆ.
  • ಅನ್ನದಾತನ ಬದುಕಿಗೆ ಹೊಸ ಕಾಯಕಲ್ಪ ಕಲ್ಪಿಸಲು 'ರೈತಸಿರಿ' ಎಂಬ ಹೊಸ ಯೋಜನೆ, ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಳ, ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಒದಗಿಸಲು 'ರೈತ ಕಣಜ' ಎಂಬ ಹೊಸ ಯೋಜನೆ ಪ್ರಕಟಿಸಿ ಇದಕ್ಕೆ 510 ಕೋಟಿ ರೂ. ಅನುದಾನ ನಿಗದಿ. ಸಣ್ಣ ಮತ್ತು ಅತಿ ಸಣ್ಣ ರೈತರ ಅಭರಣಗಳ ಮೇಲೆ ಶೇ.3ರಷ್ಟು ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ 'ಗೃಹ ಲಕ್ಷ್ಮಿ' ಎಂಬ ಹೊಸ ಬೆಳೆ ಸಾಲ ಯೋಜನೆ, ರೇಷ್ಮೆ ಕೃಷಿ ವಿಸ್ತರಣಾ ಕಾರ್ಯಕ್ರಮಕ್ಕೆ 2 ಕೋಟಿರೂ ಅನುದಾನ ಪ್ರಕಟ.
  • ಖಾಸಗಿ ಲೇವಾ ದೇವಿದಾರರು ರೈತರನ್ನು ಸುಲಿಗೆ ಮಾಡುವುದನ್ನು ತಪ್ಪಿಸಲು ಕೇರಳ ಮಾದರಿಯಲ್ಲಿ ರಾಜ್ಯದಲ್ಲೂ 'ಸಾಲ ಪರಿಹಾರ ಆಯೋಗ' ಸ್ಥಾಪಿಸುವ ಜೊತೆಗೆ, ಬಾಕಿ ಇರುವ ಹಾಗೂ ಹಾಲಿ ನೀರಾವರಿ ಯೋಜನೆಗಳ ಜಾರಿಗಾಗಿ ಜಲ ಸಂಪನ್ಮೂಲ ಇಲಾಖೆಗೆ 17 ಸಾವಿರ ಕೋಟಿ ರೂ.ಗಳ ಅನುದಾನ.
  • ತುಮಕೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ 60 ಕೋಟಿ ರೂ. ಕಾರವಾರದಲ್ಲಿ ಆಸ್ಪತ್ರೆ ಸ್ಥಾಪನೆಗೆ 150 ಕೋಟಿ ರೂ. ಕೊಡಗು, ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ, ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ಆವರಣದಲ್ಲಿ ಆಸ್ಪತ್ರೆಗೆ ಸ್ಥಾಪನೆಗೆ 100 ಕೋಟಿ ರೂ. ಅನುದಾನ ಘೋಷಣೆ.
  • ಪ್ರಾಥಮಿಕ ಶಿಕ್ಷಣದ ಸುಧಾರಣೆಗಾಗಿ 1,500 ಶಾಲಾ ಕೊಠಡಿ ನಿರ್ಮಾಣ, 5000 ಶಾಲಾ ಕೊಠಡಿಗಳ ಉನ್ನತೀಕರಣ, ಮುಂದಿನ ನಾಲ್ಕು ವರ್ಷಗಳಲ್ಲಿ ಹೋಬಳಿ ಕೇಂದ್ರಗಳಲ್ಲಿ ಒಟ್ಟು 1 ಸಾವಿರ ರಾಜ್ಯ ಪಬ್ಲಿಕ್ ಶಾಲೆಗಳ ಸ್ಥಾಪನೆ.
  • ರಕ್ತ ಸಂಗ್ರಹಣೆ, ಶೇಖರಣೆ ಮತ್ತು ವಿತರಣೆಗಾಗಿ ನಾಲ್ಕು ವಿಭಾಗೀಯ ಮಾದರಿ ರಕ್ತನಿಧಿ ಕೇಂದ್ರಗಳ ಸ್ಥಾಪನೆಗೆ 2019-20ನೇ ಸಾಲಿನ ಬಜೆಟ್ ನಲ್ಲಿ ೧೦ ಕೋಟಿ ರೂ. ಅನುದಾನ ಮೀಸಲು.
  • ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ 500 ರೂ. ಸಹಾಯಕರಿಗೆ 250 ರೂ. ಗೌರವಧನ ಹೆಚ್ಚಳಕ್ಕಾಗಿ 60 ಕೋಟಿ ರೂ. ಅನುದಾನ ನಿಗದಿ.
  • ಮಾತೃಶ್ರೀ ಯೋಜನೆಯ ಸಹಾಯಧನಮಾಸಿಕ 1 ಸಾವಿರ ರೂ. ಗಳಿಂದ 2 ಸಾವಿರ ರೂ. ಗಳಿಗೆ ಹೆಚ್ಚಿಸಲಾಗಿದೆ. ಆದರೆ, ಇದು ಜಾರಿಗೆ ಬರುವುದು ಮುಂದಿನ ನವೆಂಬರ್ 1ರಿಂದಲೇ ಎಂಬುದು ಗಮನಿಸಬೇಕಾದ ಅಂಶ.
  • ಬೆಂಗಳೂರು ನಗರದಲ್ಲಿ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಅನುಕೂಲವಾಗುವಂತೆ 'ಸಾರಥಿಯ ಸೂರು', ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ 'ಶ್ರಮಿಕ ಸೌರಭ ' ಎಂಬ ಯೋಜನೆ ಪ್ರಕಟ.
  • ರೈತರಿಗೆ ಗುಣಮಟ್ಟದ ವಿದ್ಯುತ್ ಪೂರೈಸಲು ಅನುಕೂಲವಾಗುವಂತೆ 40 ಸಾವಿರ ಹೊಸ ಟ್ರಾನ್ಸ್ ಫಾರ್ಮರ್ ಗಳನ್ನು ಅಳವಡಿಕೆ. ಹಗಲು ವೇಳೆ ಹೆಚ್ಚಿನ ವಿದ್ಯುತ್ ಪೂರೈಕೆ, ರೈತರಿಗೆ ಉಚಿತವಾಗಿ ನೀಡಲಾಗುತ್ತಿದ್ದ ನೀರಾವರಿ ಪಂಪ್ ಸೆಟ್, ಭಾಗ್ಯ ಜ್ಯೋತಿ ಮತ್ತು ಕುಟೀರ ಜ್ಯೋತಿ ಸಹಾಯಧನವನ್ನು 11,250 ಕೋಟಿ ರೂ.ಗಳಿಗೆ ಹೆಚ್ಚಳ.
  • ಸಿದ್ದಗಂಗಾ ಮಠಾಧ್ಯಕ್ಷರಾಗಿದ್ದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯ ಹುಟ್ಟೂರಾದ ರಾಮನಗರ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ವಿಶ್ವ ದರ್ಜೆಯ ಸಾಂಸ್ಕೃತಿಕ ಪಾರಂಪರಿಕ ಕೇಂದ್ರವನ್ನು 25 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ.
  • ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿರುವ ಮಂಗನ ಕಾಯಿಲೆ ನಿವಾರಣೆಗಾಗಿ ಜಿಲ್ಲಾಸ್ಪತ್ರೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಪ್ರಾರಂಭ.
  • ಬಿಯರ್, ಡ್ರಾಟ್ ಬಿಯರ್, ಮೈಕ್ರೊ ಬ್ರಿವರಿಯಲ್ಲಿ ತಯಾರಾಗುವ ಬಿಯರ್ ಹಾಗೂ ಕಡಿಮೆ ಆಲ್ಕೋಹಾಲ್ ಅಂಶಗಳಿರುವ ಮದ್ಯದ ಮೇಲಿನ ಅಬಕಾರಿ ಸುಂಕ ಹೆಚ್ಚಳ.
  • ಬೆಂಗಳೂರಿನ ಚಲನಶೀಲತೆಗಾಗಿ ಸಮಗ್ರ ಯೋಜನೆ ಜಾರಿ, ಸಾರ್ವಜನಿಕ ಸಾರಿಗೆ ಮತ್ತು ಸುಸ್ಥಿರತೆಗೆ ಆದ್ಯತೆ, ಬಿಎಂಟಿಸಿಗೆ ಬಸ್ ಸಂಖ್ಯೆ ಹೆಚ್ಚಳ,
  • ಕನಿಷ್ಠ 50 ಕಿ.ಮೀ. ಪಾದಚಾರಿ ಮಾರ್ಗ ಅಭಿವೃದ್ಧಿಗೆ ಯೋಜನೆ, ಇದಕ್ಕಾಗಿ 50 ಕೋಟಿ ರೂ. ಅನುದಾನ ಮೀಸಲು
  • 5 ಲಕ್ಷ ಬೀದಿ ದೀಪಗಳನ್ನು ಎಲ್'ಇಡಿ ದೀಪಗಳಾಗಿ ಪರಿವರ್ತನೆ.
  • 195 ಕೋಟಿ ರೂ. ವೆಚ್ಚದಲ್ಲಿ ಹೆಬ್ಬಾಳ ಮತ್ತು ಕೆ.ಆರ್.ಪುರಂ ಫ್ಲೆ ಓವರ್ ಗಳಲ್ಲಿ ಹೆಚ್ಚುವರಿ ಲೂಪ್ ನಿರ್ಮಾಣ, ಗೊರಗುಂಟೆಪಾಳ್ಯದಲ್ಲಿ ಹೊಸ ಅಂಡರ್ ಪಾಸ್ ನಿರ್ಮಾಣ, 23,093 ಕೋಟಿ ರೂ. ಅಂದಾಜು ಮೊತ್ತದ ಬೆಂಗಳೂರು ಉಪ ನಗರ ರೈಲು ಸೇವೆ ಯೋಜನೆಗೆ ಚಾಲನೆ.
  • ಸೆಂಟ್ರಲ್ ಸಿಲ್ಕ್ ಬೋರ್ಡ್'ನಿಂದ ಕೆ.ಆರ್.ಪುರಂ ಮತ್ತು ಹೆಬ್ಬಾಳ ಮಾರ್ಗವಾಗಿ ಹೊರ ವರ್ತುಲ ರಸ್ತೆ, ವಿಮಾನ ನಿಲ್ದಾಣ ಮಾರ್ಗ ನಿರ್ಮಾಣಕ್ಕೆ 16,579 ಕೋಟಿ ರೂ. ಅನುದಾನ.
  • ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ 17,200 ಕೋಟಿ ರೂ. ವೆಚ್ಚದ ಫೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ 2019-20ನೇ ಸಾಲಿಗೆ 1,000 ಕೋಟಿ ರೂ. ಅನುದಾನ ಘೋಷಣೆ.
  • ವಿವಿಧ ವಸತಿ ಯೋಜನೆಗಳಡಿಯಲ್ಲಿ 2019-20ನೇ ಸಾಲಿನಲ್ಲಿ ಒಟ್ಟು 4 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿ. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೆಚ್ಚಾಗಿ ವಾಸಿಸುವ ಬೆಂಗಳೂರಿನಲ್ಲಿರುವ ಕೊಳಗೇರಿ ಪ್ರದೇಶಗಳ ಅಭಿವೃದ್ಧಿಗಾಗಿ 300 ಕೋಟಿ ರೂ. ಮೀಸಲು.
  • ‘ಸಾರಥಿಯ ಸೂರು’ ಹೆಸರಿನಲ್ಲಿ ಬೆಂಗಳೂರಿನ ಆಟೋ ಚಾಲಕರು ಮತ್ತು ಟ್ಯಾಕ್ಸಿ ಚಾಲಕರಿಗೆ 50 ಕೋಟಿ ರೂ. ವೆಚ್ಚದಲ್ಲಿ ಬಾಡಿಗೆ ಆಧಾರದ ವಸತಿ ಯೋಜನೆ. ಮತ್ತು ಸಿದ್ಧ ಉಡುಪು ಕಾರ್ಮಿಕರಿಗೆ ಬಾಡಿಗೆ ಆಧಾರದ ವಸತಿ ಯೋಜನೆಗೆ 50 ಕೋಟಿ ರೂಪಾಯಿ ಅನುದಾನ.
  • ಗಾರ್ಮೆಂಟ್ಸ್ ಕಾರ್ಖಾನೆಗಳ ಮಹಿಳಾ ಕಾರ್ಮಿಕರಿಗೆ ಶಿಶುಪಾಲನಾ ಕೇಂದ್ರ, ಅಪಘಾತ ಪರಿಹಾರ ಸಹಾಯಧನ ಮತ್ತಿತರ ಅನುಕೂಲ ಕಲ್ಪಿಸಲು 10 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್. ಇಲ್ಲಿ ಕೆಲಸ ನಿರ್ವಹಿಸುತ್ತಿರುವ ಪ.ಜಾತಿ ಮತ್ತು ಪ.ಪಂಗಡಗಳಿಗೆ ಸೇರಿದ 25,000 ಮಹಿಳಾ ಕಾರ್ಮಿಕರ ಕೌಶಲ್ಯ ಉನ್ನತೀಕರಣ ಹಾಗೂ ಶಿಶಿಕ್ಷು ತರಬೇತಿಗಾಗಿ 37.5 ಕೋಟಿ ರೂಪಾಯಿ ಅನುದಾನ.
  • ಆಟೋ ಮತ್ತು ಟ್ಯಾಕ್ಸಿ ಚಾಲಕರಿಗಾಗಿ ಗುಂಪು ವಿಮೆ ಸೌಲಭ್ಯ. ಪೆಟ್ರೋಲ್ ಆಟೋಗಳನ್ನು ಎಲೆಕ್ಟ್ರಿಕ್ ಆಟೋಗಳಾಗಿ ಪರಿವರ್ತಿಸಲು ಸಹಾಯಧನ. ಸಾರಿಗೆ ಇಲಾಖೆ ಮೂಲಕ ಈ ಯೋಜನೆ ಜಾರಿಗೆ 30 ಕೋಟಿ ರೂಪಾಯಿ ಅನುದಾನ.
  • ವಿವಿಧ ವಲಯಗಳ ಚಾಲಕರ ಸೇವೆ ಗುರುತಿಸಲು ಎಲ್ಲಾ ಜಿಲ್ಲೆಗಳಲ್ಲಿ ಚಾಲಕರ ದಿನಾಚರಣೆ; ಪ್ರಾಮಾಣಿಕ ಮತ್ತು ಅಪಘಾತ ರಹಿತ ವಾಹನ ಚಾಲನೆ ಮಾಡಿದ ಪ್ರತೀ ಜಿಲ್ಲೆಯ ತಲಾ 10 ಚಾಲಕರಿಗೆ ತಲಾ 25 ಸಾವಿರ ರೂಪಾಯಿಗಳ ಪುರಸ್ಕಾರ.
Tags: BENGALURUCM H D KumaraswamyKannada NewsKarnataka AssemblyKarnataka BudgetSchemesTumkurಲೋಕಸಭಾ ಚುನಾವಣೆ
Previous Post

ಟೀಂ ಇಂಡಿಯಾಗೆ 7 ವಿಕೆಟ್’ಗಳ ಅಂತರದ ಗೆಲುವು

Next Post

ಹೊಸಪೇಟೆ: ಧ್ಯಾನ-ಯೋಗ ಜೀವನದ ಒಂದೇ ಮುಖಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸಪೇಟೆ: ಧ್ಯಾನ-ಯೋಗ ಜೀವನದ ಒಂದೇ ಮುಖಗಳು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025

ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

July 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!