ನವದೆಹಲಿ: ನಾನು ನಿಮ್ಮಲ್ಲಿ ಕೈ ಜೋಡಿಸಿ ಕೇಳಿಕೊಳ್ಳುತ್ತೇನೆ ಮುಷ್ಕರ ನಿಲ್ಲಿಸುವಂತೆ ಹೇಳಿ: ಈ ರೀತಿ ಪತ್ರ ಬರೆದ ಕೋರಿಕೆ ಸಲ್ಲಿಸಿರುವುದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್.. ಅದು ಯಾರಿಗೆ ಗೊತ್ತಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ..
ಹೌದು…ದೆಹಲಿ ಸರ್ಕಾರದಲ್ಲಿರುವ ಐಎಎಸ್ ಅಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಇದನ್ನು ತಮ್ಮಿಂದ ನಿಲ್ಲಿಸಲು ಸಾಧ್ಯವಾಗದ ಕೇಜ್ರಿವಾಲ್ ಪ್ರಧಾನಿಯವರ ಮೊರೆ ಹೋಗಿದ್ದಾರೆ.
ಈ ಕುರಿತಂತೆ ಪ್ರಧಾನಿಯವರಿಗೆ ಪತ್ರ ಬರೆದಿರುವ ಕೇಜ್ರಿವಾಲ್, ದೆಹಲಿ ತುಂಬಾ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುತ್ತಿದೆ, ಲೆಫ್ಟಿನೆಂಟ್ ಗವರ್ನರ್ ಮಧ್ಯ ಪ್ರವೇಶಿಸಲು ನಿರಾಕರಿಸುತ್ತಿದ್ದಾರೆ, ಐಎಎಸ್ ಅಧಿಕಾರಗಳ ಮೇಲೆ ಕೇಂದ್ರ ಸರ್ಕಾರಕ್ಕೆ ಎಲ್ಲಾ ರೀತಿಯ ಅಧಿಕಾರವಿರುತ್ತದೆ, ನಾನು ನಿಮ್ಮಲ್ಲಿ ಕೈ ಜೋಡಿಸಿ ಕೇಳಿಕೊಳ್ಳುತ್ತೇನೆ ಮುಷ್ಕರ ನಿಲ್ಲಿಸುವಂತೆ ಹೇಳಿ ಎಂದಿದ್ದಾರೆ.
ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪಕ್ಷ ಕೆಲಸ ಮಾಡುವುದಾಗಿ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ದೆಹಲಿಯ ರಾಜ್ಯಪಾಲರ ನಿವಾಸದಲ್ಲಿ ಕೈಗೊಂಡಿರುವ ಪ್ರತಿಭಟನೆ 4ನೆಯ ದಿನಕ್ಕೆ ಕಾಲಿಟ್ಟಿದೆ.
ಲೆಫ್ಟಿನೆಂಟ್ ಗವರ್ನರ್ ಮೇಲೆ ಕೇಂದ್ರ ಸರ್ಕಾರಕ್ಕೆ ಹಿಡಿತವಿರುತ್ತದೆ. ಹೀಗಾಗಿ ಜನ ಹೇಳುತ್ತಿದ್ದಾರೆ ಐಎಎಸ್ ಅಧಿಕಾರಿಗಳ ಮುಷ್ಕರದ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿದೆ ಎಂಗು ಹೇಳುತ್ತಿದ್ದಾರೆ ಎಂದು ಕೇಜ್ರಿವಾಲ್ ಪತ್ರದಲ್ಲಿ ಬರೆದಿದ್ದಾರೆ.
Discussion about this post