ಹಾನಗಲ್: ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ತಮ್ಮ ವಿರುದ್ಧ ಅಪಪ್ರಚಾರ ಮಾಡುವ ಮೂಲಕ ಸಿದ್ದರಾಮಯ್ಯ ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ದಾರೆ. ಆದರೆ, ಮಾನ ಮರ್ಯಾದೆ ಇಲ್ಲದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವುದು ಯಾಕೆ ಎಂದು ಸುಮ್ಮನಾದೆ ಎಂದು ಬಿಜೆಪಿ ನಾಯಕ ಜನಾರ್ಧನ ರೆಡ್ಡಿ ಕಿಡಿ ಕಾರಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಅವರು, ಗಣಿಗಾರಿಕೆ ವಿಚಾರದಲ್ಲಿ ತಮ್ಮ ಅಮೂಲ್ಯವಾದ ನಾಲ್ಕು ವರ್ಷಗಳ ಕಾಲವನ್ನು ಜೈಲಿಗೆ ಕಳುಹಿಸಿ ಹಾಳು ಮಾಡಿದ್ದಾರೆ. ಸಿದ್ದರಾಮಯ್ಯನವರಿಗೆ ಮಾನ ಮರ್ಯಾದೆ ಇದೆಯಾ? ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲಾದವರೆಲ್ಲಾ ಈಗ ಅವರ ಜೊತೆಯಲ್ಲೇ ಇದ್ದಾರೆ ಎಂದು ಟೀಕಿಸಿದರು.
















