ನವದೆಹಲಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಾಲ ಪಡೆಯಲು ಏಕಗವಾಕ್ಷಿ ಪದ್ದತಿಯನ್ನು ಜಾರಿಗೊಳಿಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಭರವಸೆ ನೀಡಿರುವ ಅವರು, ಶಿಕ್ಷಣ ಸಾಲದ ಕುರಿತು ಏಕಗವಾಕ್ಷಿ ಪದ್ದತಿ ಕಾನೂನು ಜಾರಿಗೊಳಿಸಿ, ವಿದ್ಯಾರ್ಥಿಗಳ ಹಕ್ಕು ಹಾಗೂ ಕರ್ತವ್ಯಗಳನ್ನೂ ಅಳವಡಿಸಲಾಗುವುದು ಎಂದಿದ್ದಾರೆ.
ಇನ್ನು, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಒಂದನೆಯ ತರಗತಿಯಿಂದ 12ನೆಯ ತರಗತಿಯವರೆಗೂ ಉಚಿತ ಶಿಕ್ಷಣದ ಭರವಸೆ ನೀಡಿರುವ ರಾಹುಲ್, ಹಿಂದುಳಿದ ಪ್ರದೇಶಗಳಲ್ಲಿ ರಾಜ್ಯ ಸರ್ಕಾರಗಳ ಮೂಲಕ ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗುವುದು ಎಂದಿದ್ದಾರೆ.
Discussion about this post