ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೋಕಸಭಾ ಚುನಾವಣೆಗೆ ಮೂವರು ಮೈತ್ರಿ ಅಭ್ಯರ್ಥಿಗಳನ್ನು ಜೆಡಿಎಸ್ ಘೋಷಣೆ ಮಾಡಿದ್ದು, ಮಂಡ್ಯದಿಂದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ #HDKumaraswamy ಸ್ಪರ್ಧೆ ಮಾಡಲಿದ್ದಾರೆ. ಆದರೆ, ಇನ್ನೂ ಪಕ್ಷದಿಂದ ಅಧಿಕೃತ ಘೋಷಣೆ ಬಾಕಿಯಿದೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, #HDDevegowda ಮಂಡ್ಯದಿಂದ ಎಚ್.ಡಿ. ಕುಮಾರಸ್ವಾಮಿ, ಕೋಲಾರದಿಂದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಹಾಗೂ ಹಾಸನದಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಎಲ್ಲಾ ಕ್ಷೇತ್ರಗಳಲ್ಲಿ ಒಟ್ಟಾಗಿ ಪ್ರಚಾರ ಮಾಡಲಿದ್ದು, ರಾಷ್ಟçದ ಹಿತದೃಷ್ಟಿಯಿಂದ ಭಿನ್ನಾಭಿಪ್ರಾಯ ಬದಿಗೊತ್ತಲಿದ್ದಾರೆ ಎಂದರು.
ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಅವಮಾನಿಸಿದೆ. ರಾಜ್ಯದಲ್ಲಿ ಎಸ್ಸಿ ಮತ್ತು ದೀನದಲಿತರ ಹಿತವನ್ನು ಕಾಂಗ್ರೆಸ್ ಎಂದಿಗೂ ರಕ್ಷಿಸುವುದಿಲ್ಲ ಎಂದರು.
ಮೋದಿ ಅವರು ಮೂರನೇ ಬಾರಿಗೆ ರಾಷ್ಟçವನ್ನು ಆಳಬೇಕು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಿತದೃಷ್ಟಿಯಿಂದ ಆರ್ಥಿಕ ನೀತಿಗಳನ್ನು ರೂಪಿಸಬೇಕು. ಹೀಗಾಗಿ ನಾನು ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post