ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವಂತೆ ವಸತಿ ಯೋಜನೆಯಲ್ಲೂ ಸಹ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ.
ಈ ಕುರಿತಂತೆ, ವಸತಿ ಯೋಜನೆಯಲ್ಲೂ ಸಹ ತಮ್ಮ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿಯನ್ನು ಹೆಚ್ಚಳ ಮಾಡಬೇಕು ಎಂದು ವಸತಿ ಇಲಾಖೆ ಸಚಿವ ಜಮೀರ್ ಅಹಮದ್ ಸರ್ಕಾರದ ಮುಂದೆ ಪ್ರಸ್ತಾವನೆ ಇರಿಸಿದ್ದಾರೆ ಎಂದುದ ವರದಿಯಾಗಿದೆ.
ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ವಿಷಯನ್ನು ಜಮೀರ್ ಅಹಮದ್ ಪ್ರಸ್ತಾಪಿಸಿದ್ದು, ಚರ್ಚೆಯಾಗಲಿದೆ.

ಈವರೆಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ 1ರವರೆಗೆ ಗುತ್ತಿಗೆ ಮೀಸಲಾತಿಯು ಅನ್ವಯವಾಗುತ್ತಿತ್ತು. ಈ ಸೌಲಭ್ಯವನ್ನು ಮುಸ್ಲಿಮರಿಗೆ (ಪ್ರವರ್ಗ 2-ಬಿ) ವಿಸ್ತರಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಈ ಹಿಂದೆ ಕೈಗೊಂಡಿತ್ತು.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7ರಂದು ಮಂಡಿಸಿದ ಬeಟ್’ನಲ್ಲಿ ಮೀಸಲಾತಿ ನೀಡುವ ಬಗ್ಗೆ ಘೋಷಣೆ ಮಾಡಿದ್ದರು.
ಪ್ರತಿಪಕ್ಷಗಳ ವಿರೋಧದ ಮಧ್ಯೆ ಸರ್ಕಾರ ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಗೆ ಒಪ್ಪಿಗೆ ನೀಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post