ಕಲ್ಪ ಮೀಡಿಯಾ ಹೌಸ್ | ಸಾಗರ |
ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆ ಬೆನ್ನಲ್ಲೇ ಸಂಪುಟ ವಿಸ್ತರಣೆ ಕುರಿತಾಗಿ ಬೆಳವಣಿಗೆಗಳು ಗರಿಗೆದರಿದ್ದು, ಆಕಾಂಕ್ಷಿಗಳ ಪಟ್ಟಿಯೂ ಸಹ ದೊಡ್ಡದಿದೆ.
Also Read: ಕುವೆಂಪು ವಿವಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆ
ಈ ನಡುವೆಯೇ ಸಾಗರ ಶಾಸಕ ಹರತಾಳು ಹಾಲಪ್ಪ ಅವರಿಗೆ ಸಚಿವ ಸ್ಥಾನ ದೊರೆಯುತ್ತದೆಯೇ ಎಂಬ ಕುರಿತಾಗಿ ಚರ್ಚೆಗಳು ನಡೆಯುತ್ತಿವೆ. ಸದ್ಯ ಎಂಎಸ್’ಐಎಲ್ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಲಪ್ಪ ಅವರು, ತಮ್ಮ ಕ್ಷೇತ್ರದಲ್ಲೂ ಸಹ ಅತ್ಯಂತ ಕ್ರಿಯಾಶೀಲ ಹಾಗೂ ಜನಪರ ಶಾಸಕರಾಗಿದ್ದಾರೆ.


ಇಂತಹ ಜನನಾಯಕನಿಗೆ ಈಗ ಸಚಿವ ಸ್ಥಾನ ದೊರೆಯುತ್ತದೆ ಎಂಬ ಮಾತುಗಳು ಕೇಳಿಬರುತ್ತಿದೆ.
ಈ ಬಗ್ಗೆ ಇಂದು ಮಾತನಾಡಿರುವ ಹಾಲಪ್ಪನವರು, ನಾನು ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಪಕ್ಷದ ಪ್ರಮುಖರು ಹಾಗೂ ಮುಖ್ಯಮಂತ್ರಿಗಳು ನನಗೆ ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿರ್ವಹಿಸುತ್ತೇನೆ. ಆದರೆ, ಪಕ್ಷದ ಅಂತಿಮ ತೀರ್ಮಾನಕ್ಕೆ ನಾನು ಬದ್ದನಾಗಿದ್ದೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post