ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪೂರ್ವ ನಿಗದಿಯಂತೆ ಸಿಗಂದೂರು ಸೇತುವೆ ಜುಲೈ 14ರ ನಾಳೆ ಉದ್ಘಾಟನೆ ಆಗಲಿದ್ದು, ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್. ಕೆ. ಜಗದೀಶ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದಿದ್ದಾರೆ.
ಜಿಲ್ಲೆಯ ಅತ್ಯಂತ ಮಹತ್ವಪೂರ್ಣ ಕಾರ್ಯಕ್ರಮ ಸಿಗಂದೂರು ಚೌಡೇಶ್ವರಿ ಸೇತುವೆಯ ಉದ್ಗಾಟನಾ ಸಮಾರಂಭಕ್ಕೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿಯವರು ಸೇರಿದಂತೆ ಅನೇಕ ಗಣ್ಯರು ಆಗಮಿಸುತ್ತಿದ್ದು, ನಿಗಧಿಯಾದ ಕಾರ್ಯಕ್ರಮ ನಡೆಯಲು ಎಲ್ಲಾ ಪ್ರಯತ್ನ ಸಾಗಿದೆ ಎಂದಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೇಂದ್ರ ಸಚಿವರಿಗೆ ಬರೆದಿರುವ ಪತ್ರ ಹಲವು ಸಾಮಾಜಿಕ ಜಾಲತಾಣ ಹಾಗು ಮಾಧ್ಯಮಗಳಲ್ಲಿ ಪ್ರಚಾರವಾಗುತ್ತಾ ಜನರಲ್ಲಿ ಗೊಂದಲ ಮೂಡಿಸುತ್ತಿದ್ದು ಯಾವುದೇ ಕಾರಣಕ್ಕೂ ಕಾರ್ಯಕ್ರಮ ಮುಂದೂಡುವುದಿಲ್ಲ. ನಿಗಧಿಯಂತೆ ನಡದೇ ನಡೆಯುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post