No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Thursday, February 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಈ ಬಾರಿ ಕಡಿಮೆಯಾಗಲಿದೆಯೇ ಶಾಲಾ ಪಠ್ಯಕ್ರಮ? ಸಚಿವ ಸುರೇಶ್ ಕುಮಾರ್ ಇಂಗಿತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 7, 2020
in ರಾಷ್ಟ್ರೀಯ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೋವಿಡ್ ನಿಂದಾಗಿ ನಿಗದಿತ ದಿನಾಂಕಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆಗಳು ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು ಆ ಅವಧಿಗೆ ತಕ್ಕಂತೆ ರೂಪಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಿದ ಸಚಿವರು ಈ ಶೈಕ್ಷಣಿಕ ಸಾಲಿನ ಪ್ರಾರಂಭದ ಬಗ್ಗೆ ಈ ಹಂತದಲ್ಲಿ ನಿರ್ಣಯಿಸಲು ಸಾಧ್ಯವಾಗದ ಕಾರಣ 1ರಿಂದ 10ನೇ ತರಗತಿ ಹಾಗೂ ಪದವಿ ಪೂರ್ವ ಶಿಕ್ಷಣದ ಪಠ್ಯಕ್ರಮದಲ್ಲಿ ಹೆಚ್ಚುವರಿ ಎನ್ನುವ ಪಠ್ಯವನ್ನು ಗುರುತಿಸುವ ಪ್ರಯತ್ನಕ್ಕೆ ಕೂಡಲೇ ಚಾಲನೆ ನೀಡಬೇಕೆಂದರು.

ಶೈಕ್ಷಣಿಕ ವರ್ಷದಲ್ಲಿ ಕಳೆದುಕೊಳ್ಳುವ ಅವಧಿಯ ಆಧಾರದ ಮೇಲೆ ಮಕ್ಕಳ ಕಲಿಕೆಗೆ ಹೊರೆಯಾಗದ ರೀತಿಯಲ್ಲಿ ಅನವಶ್ಯಕ ಪುನರಾವರ್ತಿತವಾದ ಪಠ್ಯವನ್ನು ಕೈಬಿಡಬೇಕು. ಅತ್ಯಾವಶ್ಯಕವಾದ ಪಠ್ಯವನ್ನು ಉಳಿಸಿಕೊಳ್ಳಲು ಕ್ರಿಯಾ ಯೋಜನೆಯನ್ನು ಕೂಡಲೇ ಸಿದ್ಧಪಡಿಸಬೇಕು. ಕೊರೋನಾ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ಕಡಿತವಾಗಬಹುದಾದ ಅವಧಿಯ ಆಧಾರದಲ್ಲಿ ಪ್ರತಿ ತರಗತಿ ಹಾಗೂ ಪ್ರತಿ ವಿಷಯಕ್ಕೆ ಸಂಬಂಧಿಸಿದಂತೆ 15 ದಿನಗಳ, 1 ತಿಂಗಳ, ಒಂದುವರೆ ತಿಂಗಳ, 2 ತಿಂಗಳ ಹಂತವಾರು ಹೆಚ್ಚುವರಿಯಾಗಬಹುದಾದ ಪಠ್ಯಗಳನ್ನುಗುರುತಿಸಿ ಅವುಗಳನ್ನು ಕೈಬಿಡುವ ಬಗ್ಗೆ ವಿಸ್ತ್ರತ ವರದಿ ತಯಾರಿಸಬೇಕೆಂದು ಸಚಿವರು ಸೂಚಿಸಿದರು.

ಕೋವಿಡ್ ಕುರಿತ ಪಠ್ಯಕ್ರಮ ಜಾರಿ 
ಇದೇ ಶೈಕ್ಷಣಿಕ ಸಾಲಿನಿಂದ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಾಮಾಜಿಕ ಹೊಂದಾಣಿಕೆಗಳ ಬಗ್ಗೆ ಪಠ್ಯವನ್ನು ಎಲ್ಲ ತರಗತಿಗಳಿಗೆ ಬೋಧಿಸುವಲ್ಲಿ ಕೂಡಲೇ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ ಸಚಿವರು, ಕೋವಿಡ್-19 ಕುರಿತಂತೆ ಆಯಾ ವಯೋಮಾನದ ವಿದ್ಯಾರ್ಥಿಗಳಿಗೆ ಆಕರ್ಷಣೀಯವಾಗುವ ರೀತಿಯಲ್ಲಿ ಕಿರುಪಠ್ಯ ರಚನೆ ಮಾಡಿ ಶಾಲೆಗಳಿಗೆ ಪೂರೈಸುವುದರ ಜೊತೆಗೆ ಶಿಕ್ಷಕರ ತರಬೇತಿ ಪಠ್ಯಕ್ರಮದಲ್ಲಿಯೂ ಈ ಕುರಿತಾದ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಇದು ಪಠ್ಯಕ್ರಮದ ಒಂದು ಭಾಗವಾಗಿ ಕಡ್ಡಾಯವಾಗಿ ಕಲಿಯಬೇಕಾದ ವಿಷಯವಾಗಿರುವಂತೆ ಕಟ್ಟುನಿಟ್ಟಾಗಿ ಅನುಷ್ಠಾನವಾಗುವಂತೆ ನೋಡಿಕೊಳ್ಳಬೇಕು ಎಂದು ಸಹ ಅವರು ಸೂಚಿಸಿದರು.

ಯೂ-ಟ್ಯೂಬ್ ಚಾನೆಲ್ ಬೋಧನೆ
ಮಕ್ಕಳವಾಣಿ ಯೂ-ಟ್ಯೂಬ್ ಚಾನೆಲ್ ಇಡೀ ರಾಷ್ಟ್ರದ ಗಮನ ಸೆಳೆದಿದ್ದು, ಮಾಹಿತಿ ತಂತ್ರಜ್ಞಾನಾಧಾರಿತವಾದ ಬೋಧನೆಯನ್ನೂ ಸಹ ನಾವು ಪೂರಕ ಕಲಿಕೆಯಾಗಿ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ಇರುವ ಹಿನ್ನೆಲೆಯಲ್ಲಿ 1ರಿಂದ 10ನೇ ತರಗತಿವರೆಗೆ ವಿಷಯವಾರು, ಅಧ್ಯಾಯವಾರು ಆಂಗ್ಲ ಮತ್ತು ಕನ್ನಡ ಮಾಧ್ಯಮಗಳ ಬೋಧನೆಯನ್ನು ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿ ಚಿತ್ರೀಕರಿಸಿ ಯೂ-ಟ್ಯೂಬ್ ಚಾನೆಲ್ ನಲ್ಲಿ ಶಾಶ್ವತವಾಗಿ ಲಭ್ಯವಿರುವಂತೆ ಮಾಡಲು ಸುರೇಶ್ ಕುಮಾರ್ ಸೂಚನೆ ನೀಡಿದರು.

ಅಂತೆಯೇ ಸಾಮಾಜಿಕ ಅಂತರ ನಮ್ಮ ಬದುಕಿನ ಸಹಜ ರೀತಿಯಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಅಂತರವನ್ನು ಕಾಯ್ದುಕೊಳ್ಳುವ ರೀತಿಯ ಕಲಿಕಾ ವಾತಾವರಣ ಕಲ್ಪಿಸುವ ಜವಾಬ್ದಾರಿ ಶಿಕ್ಷಣ ಇಲಾಖೆಯದ್ದಾಗಿದ್ದು, ಪರ್ಯಾಯ ಮಾರ್ಗಗಳ ಕುರಿತಂತೆ ಕೂಡಲೇ ಕ್ರಿಯಾ ಯೋಜನೆ ಸಿದ್ಧಪಡಿಸಲೂ ಸಹ ಸಚಿವರು ಸೂಚಸಿದರು.

ಇಂತಹ ಸಂದರ್ಭದಲ್ಲಿ ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಶಾಲೆಗಳ ಕಲಿಕಾ ವಾತಾವರಣದ ಕುರಿತಂತೆ ಭರವಸೆಯನ್ನು ಮೂಡಿಸುವುದು ಶಿಕ್ಷಣ ಇಲಾಖೆಯ ಪ್ರಥಮ ಆದ್ಯತೆಯಾಗಬೇಕಿದ್ದು, ಈ ಕುರಿತಂತೆ ಶಿಕ್ಷಕರಿಗೆ ತರಬೇತಿ ನೀಡಿಕೆ ಮತ್ತು ಸಂವೇದನೆಗೊಳಿಸುವ ಅಭಿಯಾನವನ್ನು ಕೈಗೆತ್ತಿಕೊಳ್ಳಬೇಕು. ಆರ್ ಟಿ ಇ ಅಡಿಯ ನಿರಂತರ ಕಲಿಕಾ ಮೌಲ್ಯಮಾಪನದ ಆಶಯವನ್ನು ಸಮಗ್ರವಾಗಿ ಅನುಷ್ಠಾನಗೊಳಿಸುವಲ್ಲಿ ಇಂದಿನ ಪರಿಸ್ಥಿತಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಅವರು ಹೇಳಿದರು.

ಕೋವಿಡ್ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತಂತೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಕ್ರಮಗಳ ಬಗ್ಗೆ ಅಧ್ಯಯನ ಮಾಡಿ ತಮಗೆ ವರದಿ ಸಲ್ಲಿಸಬೇಕೆಂದು ಸೂಚನೆ ನೀಡಿದ ಸಚಿವರು, ತಂತ್ರಜ್ಞಾನ ಬಳಕೆ ದೃಷ್ಟಿಯಿಂದ ಸರ್ಕಾರದ ಮಾಹಿತಿ ತಂತ್ರಜ್ಞಾನ ವೇದಿಕೆಗಳನ್ನು ಸೂಕ್ತರೀತಿಯಲ್ಲಿ ಬಳಸಿಕೊಂಡು ನೀತಿ ನಿರೂಪಣೆಗೆ ಕ್ರಮ ವಹಿಸಲು ಸೂಚನೆ ನೀಡಿದರು.

ಟಿಇಟಿ ಪರೀಕ್ಷಾ ದಿನಾಂಕ ನಿಗದಿಗೊಳಿಸಿ
ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಣೆಯಾದ ಕೂಡಲೇ ಟಿಇಟಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಬೇಕೆಂದು ಸೂಚನೆ ನೀಡಿದ ಸಚಿವರು, ಮುಂದಿನ ದಿನಗಳಲ್ಲಿ ಈ ಪರೀಕ್ಷೆಯನ್ನು ಆನ್ ಲೈನ್ ಮೂಲಕ ನಿರ್ವಹಣೆ ಮಾಡುವಲ್ಲಿಪೂರ್ವ ಸಿದ್ಧತಾ ಕ್ರಮಗಳನ್ನು ಪ್ರಾರಂಭಿಸಲು ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಕಳೆದ ವಿಧಾನಮಂಡಲದ ಅಧಿವೇಶನದಲ್ಲಿ ಅನುಮೋದನೆಗೊಂಡ ವರ್ಗಾವಣಾ ಕಾಯ್ದೆಯ ನಿಯಮಗಳನ್ನು ಶೀಘ್ರ ರೂಪಿಸಿ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಲು ನಿರ್ದೇಶನ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್, ಆಯುಕ್ತ ಡಾ. ಕೆ.ಜೆ. ಜಗದೀಶ್, ಎಸ್ಎಸ್ ಕೆ ಯೋಜನಾ ನಿರ್ದೇಶಕ ಡಾ. ಎಂ.ಟಿ. ರೇಜು, ಪಿಯು ಇಲಾಖೆ ನಿರ್ದೇಶಕಿ ಕನಗವಲ್ಲಿಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Get in Touch With Us info@kalpa.news Whatsapp: 9481252093

Tags: Covid19KannadaNewsWebsiteLatestNewsKannadaMinister Suresh KumarSchool Booksschool curriculumಕೋವಿಡ್19ಶಾಲಾ ಪಠ್ಯಕ್ರಮಶೈಕ್ಷಣಿಕ ಪಠ್ಯಸಚಿವ ಎಸ್. ಸುರೇಶ್ ಕುಮಾರ್
Share234Tweet123Send
Previous Post

Quarantine has given more energy to work: Medical Education Minister Dr.K.Sudhakar

Next Post

ಪ್ಯಾಕೇಜ್ ಘೋಷಿಸಿದ ಸಿಎಂಗೆ ಅಭಿನಂದನೆಗಳ ಮಹಾಪೂರ: ಯಾವ ಸಮುದಾಯದವರು ಏನೆಂದರು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹುಟ್ಟು ಹೋರಾಟಗಾರ ಬಿಎಸ್’ವೈ ಕೈ ಹಿಡಿಯುತ್ತಾರೆಯೇ 15 ಕ್ಷೇತ್ರದ ಮತದಾರರು?

ಪ್ಯಾಕೇಜ್ ಘೋಷಿಸಿದ ಸಿಎಂಗೆ ಅಭಿನಂದನೆಗಳ ಮಹಾಪೂರ: ಯಾವ ಸಮುದಾಯದವರು ಏನೆಂದರು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

February 19, 2026
ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಲೈಂಗಿಕ ದೌರ್ಜನ್ಯ ಆರೋಪ | ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್‌ ಬಂಧನ

February 19, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ | ಕುಂಸಿ, ಅರಸಾಳು ರೈಲು ಪ್ರಯಾಣಿಕರಿಗೆ ಮತ್ತೊಮ್ಮೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

February 19, 2026
ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

February 19, 2026
ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

February 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL