ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿಗಳು ಪಠ್ಯಜ್ಞಾನದ ಜೊತೆಗೆ ನಿರ್ವಹಣಾ ಕೌಶಲ್ಯ ಮತ್ತು ಕಾರ್ಪೊರೇಟ್ ಶಿಷ್ಟಾಚಾರಗಳನ್ನು ಬೆಳೆಸಿಕೊಂಡರೆ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಲ್ನಾಡ್ ಅಲಾಯ್ ಕ್ಯಾಸ್ಟಿಂಗ್ ಪ್ರೈವೇಟ್ ಲಿಮಿಟೆಡ್ ಕ್ವಾಲಿಟಿ ಅಪರೇಷನ್ ಮತ್ತು ಟೆಕ್ನಿಕಲ್ ಲೀಡರ್ಶಿಪ್ ನಿರ್ದೇಶಕ ಮಹಾವೀರ ಜೈನ್ ಹೇಳಿದರು.
ನಗರದ ಪಿಇಎಸ್ ಇನ್‌ಸ್ಟಿಟ್ಯೂಟ್ ಅಫ್ ಅಡ್ವಾನ್ಸ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ನ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ವರ್ಷದ ಬಿಬಿಎ, ಬಿಬಿಎ (ಟಿ&ಟಿ) ಮತ್ತು ಬಿಬಿಎ (ಹೆಚ್‌ಇಎಂ) ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘Managerial Skills and Corporate Etiquettes’ ವಿಷಯದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

Also read: WorldCup | ಮೆಸ್ಸಿ ಮತ್ತೆ ಇತಿಹಾಸ: ಅರ್ಜೆಂಟೀನಾ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ
ಕಾರ್ಪೊರೇಟ್ ಕ್ಷೇತ್ರದಲ್ಲಿ ಸಂವಹನ ಕೌಶಲ್ಯ, ಸಮಯದ ಸದ್ಬಳಕೆ, ತಂಡದೊಂದಿಗೆ ಕಾರ್ಯನಿರ್ವಹಿಸುವ ಮನೋಭಾವ, ನಾಯಕತ್ವದ ಗುಣಗಳು, ವೃತ್ತಿಪರ ನಡವಳಿಕೆ ಹಾಗೂ ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಂಡು ಉದ್ಯಮ ವಲಯದ ಅಗತ್ಯಗಳಿಗೆ ತಕ್ಕಂತೆ ಸಜ್ಜಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಮ್ಯಾನೇಜ್‌ಮೆಂಟ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ನೌಷಿನ್ ಆರ್. ಎಸ್ ನಿರೂಪಿಸಿದರು. ಹಾಗೂ ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಮಂಜುನಾಥ್‌ಎಚ್.ಆರ್ ಹಾಗೂ ಮ್ಯಾನೇಜ್‌ಮೆಂಟ್ ವಿಭಾಗದ ಮುಖ್ಯಸ್ಥರಾದ ಶ್ರೀಯುತ ಮೋಹನ್ ಡಿ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









