ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಲು ಉದ್ಯಮಶೀಲ ಮನೋಭಾವ ಅತ್ಯಗತ್ಯ ಎಂದು Bharath Hallmarking center ಮಾಲೀಕ ಸುಮಿತ್ ಪಾಟೀಲ್ ಹೇಳಿದರು.
ನಗರದ ಪಿಇಎಸ್ ಇನ್‌ಸ್ಟಿಟ್ಯೂಟ್ ಅಫ್ ಅಡ್ವಾನ್ಸ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ಬಿಎಸ್ಸಿ ವಿಭಾಗದ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ‘Entrepreneurial Mindset for the Real World’ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
Also read: ಕಾರ್ಪೊರೇಟ್ ಶಿಷ್ಟಾಚಾರ ಯಶಸ್ಸಿನ ಮೆಟ್ಟಿಲು: ಮಹಾವೀರ ಜೈನ್
ವಿದ್ಯಾರ್ಥಿಗಳು ಕಾಲೇಜು ಶಿಕ್ಷಣದ ಜೊತೆಗೆ ಸಂವಹನ ಕೌಶಲ್ಯ, ನಾಯಕತ್ವ, ಸಮಯ ನಿರ್ವಹಣೆ, ಆರ್ಥಿಕ ಶಿಸ್ತು ಹಾಗೂ ಗ್ರಾಹಕರೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಗುಣಗಳನ್ನು ರೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ತಮ್ಮ ಉದ್ಯಮದ ಅನುಭವಗಳನ್ನು ಹಂಚಿಕೊಂಡ ಅವರು, ಪರಿಶ್ರಮ ಮತ್ತು ದೃಢಸಂಕಲ್ಪದಿಂದ ಯಾವುದೇ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಪ್ರೇರಣಾದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ ಹೆಚ್ ಆರ್, ವಿಜ್ಞಾನ ವಿಭಾಗದ ಪ್ರಭಾರ ಮುಖ್ಯಸ್ಥರಾದ ರಾಧಿಕ ಎಂ ಹಾಗೂ ವಿಭಾಗದ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ವಿತ್ತ ಎಸ್.ಬಿ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

