ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ವತಿಯಿಂದ ಕಾರ್ಖಾನೆ ಆವರಣದಲ್ಲಿ ವಿವಿಧ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.
ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಸುಸ್ಥಿರ ಅಭಿವೃದ್ಧಿಯ ಮಹತ್ವದ ಬಗ್ಗೆ ಸಿಬ್ಬಂದಿ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
Also Read>> ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ
ಕಾರ್ಯಕ್ರಮಕ್ಕೆ ಬೆಳಿಗ್ಗೆ ಸಂಸ್ಥೆಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ರೀವತ್ಸನ್, ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ಎಂ.ಜಿ. ನಾಗರಾಜ್, ಸಿ.ಎಚ್.ಆರ್.ಓ ರಿತೇಶ್ ಜೋಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಕಾರ್ಮಿಕ ಮುಖಂಡರು ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಈ ವೇಳೆ ಹೆಚ್ಚಿನ ಪ್ರಮಾಣದಲ್ಲಿ ಮರಗಳನ್ನು ಬೆಳೆಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.
ಸಂಜೆ 4 ಗಂಟೆಗೆ ಕಾರ್ಖಾನೆ ಆಡಿಟೋರಿಯಂನಲ್ಲಿ ಸಮಾರೋಪ ಸಮಾರಂಭ ನಡೆಯಿತು. ಮುಖ್ಯ ಅತಿಥಿಯಾಗಿ ಕೋಪ್ಪಳ ಪರಿಸರ ಇಲಾಖೆಯ ಹಿರಿಯ ಸಹಾಯಕ ಪರಿಸರ ಅಧಿಕಾರಿ ಶ್ರೀ ಮುರುಳೀಧರ್ ಭಾಗವಹಿಸಿ ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ ಹಾಗೂ ಹವಾಮಾನ ಬದಲಾವಣೆಯ ಸವಾಲುಗಳ ಕುರಿತು ಮಾತನಾಡಿದರು. ಕೈಗಾರಿಕೆಗಳು ಪರಿಸರ ಸ್ನೇಹಿ ಕ್ರಮಗಳನ್ನು ಅನುಸರಿಸಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ಶ್ರೀ ಎಂ.ಜಿ. ನಾಗರಾಜ್, ಹೆಚ್‌ಆರ್ ವಿಭಾಗದ ಉಪಾಧ್ಯಕ್ಷ ಶ್ರೀ ಶಿವಯ್ಯ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜೀವನ ಶೈಲಿಯ ಭಾಗವಾಗಬೇಕು ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.
ಪರಿಸರ ದಿನಾಚರಣೆಯ ಅಂಗವಾಗಿ ಸಿಬ್ಬಂದಿ ಹಾಗೂ ಕಾರ್ಮಿಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಚಿತ್ರಕಲೆ, ಪ್ರಬಂಧ, ಘೋಷಣೆ ಮತ್ತು ಪೋಟೋಗ್ರಾಫಿ ಸ್ಪರ್ಧೆಯ ವಿಜೇತರಾದವರಿಗೆ ವೇದಿಕೆಯಲ್ಲಿ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.
ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೊಪ್ಪಳ ತಾಲ್ಲೂಕಿನ ಅತ್ಯಧಿಕ ಅಂಕ ಗಳಿಸಿದ ಎಂಟು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಸನ್ಮಾನಿಸಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯು ಪ್ರೋತ್ಸಾಹ ನೀಡಿತು.
ಕಾರ್ಯಕ್ರಮದಲ್ಲಿ ಕಾರ್ಮಿಕರು ಮುಖಂಡರು, ಕಾರ್ಮಿಕರು, ಗುತ್ತಿಗೆದಾರರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆಯ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಹಸಿರು ಪರಿಸರ ನಿರ್ಮಾಣ, ಮಾಲಿನ್ಯ ನಿಯಂತ್ರಣ ಮತ್ತು ಪ್ರಕೃತಿ ಸಂಪನ್ಮೂಲಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂಬ ಸಂದೇಶದೊಂದಿಗೆ ವಿಶ್ವ ಪರಿಸರ ದಿನಾಚರಣೆ-2026 ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
(ವರದಿ: ಮುರಳೀಧರ್, ಕೊಪ್ಪಳ)
ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news



















