ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದ ಆರ್ಥಿಕ ಸುಧಾರಣೆಗಳ ಹರಿಕಾರ, ವಿಶ್ವ ವಿಖ್ಯಾತ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್(91) #ManamohanSingh ವಿಧಿವಶರಾಗಿದ್ದಾರೆ.
ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರನ್ನು ಇಂದು ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು.
ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಳಗಾವಿಯಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ.
Also read: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ | ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ
2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು ಮತ್ತು 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಧಾನಿಯಾಗಿ 2 ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ್ದರು.
ಸಿಂಗ್ ಅವರ ರಾಜಕೀಯ ಜೀವನು 1991ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ, ಅಂದಿನ ಪ್ರಧಾನಿ ಪಿವಿ ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡರು, ಇದು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣವಾಗಿತ್ತು.
1990 ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಮನಮೋಹನ್ ಸಿಂಗ್ ಹೊಸ ದಿಕ್ಕು ತೋರಿಸಿದ್ದರ ಕೀರ್ತಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ.
6 ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಸಿಂಗ್, ಒಮ್ಮೆಯೂ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಲಿಲ್ಲ. 1999 ರಲ್ಲಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಸಿಂಗ್, ಬಿಜೆಪಿಯ ವಿಜಯ್ ಕುಮಾರ್ ಮಲ್ಹೋತ್ರ ವಿರುದ್ಧ ಪರಾಭವಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post