ಕಲ್ಪ ಮೀಡಿಯಾ ಹೌಸ್ | ಯಾದಗಿರಿ |
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಡೆದಿದೆ.
ಕಲಬುರಗಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಬಸ್‌ನಲ್ಲಿ 37 ಜನ ಪ್ರಯಾಣಿಸುತ್ತಿದ್ದರು. ಹತ್ತಿಗುಡೂರು ಬಳಿಯ ಹಳ್ಳದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಘಟನೆಯ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕೆಲ ಗಾಯಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಬೆಂಗಳೂರು: ಧಾರಾಕಾರ ಮಳೆ | ಧರೆಗುರುಳಿದ ಮರಗಳು, ಸಂಚಾರ ಅಸ್ತವ್ಯಸ್ತ
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಸುರಪುರ ಪೊಲೀಸರು ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನ ಬಸ್‌ನಿಂದ ಹೊರತೆಗೆದು ಚಿಕಿತ್ಸೆಗಾಗಿ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























