ಕಲ್ಪ ಮೀಡಿಯಾ ಹೌಸ್ | ಯಾದಗಿರಿ |
ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದಲ್ಲಿ ಶಿಕ್ಷಕ ಹಣಮೇಗೌಡನ ಎಂಬುವವರನ್ನು ಬಂಧಿಸಿ, ಪೋಕ್ಸೋ ಕಾಯ್ದೆ POSCO case ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಘಟನೆ ನಡೆದಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

Also read: ಕಳೆದ ಲೋಕಸಭಾ ಚುನಾವಣೆಯೇ ಬೇರೆ, ಈ ಬಾರಿಯದ್ದೇ ಬೇರೆ: ಮಾಜಿ ಸಿಎಂ ಎಚ್’ಡಿಕೆ
ಘಟನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ನಾಲ್ವರು ಅಧಿಕಾರಿಗಳ ತಂಡ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರಿಂದ ಮಾಹಿತಿಯನ್ನೂ ಸಹ ಸಂಗ್ರಹಿಸಿತ್ತು.

ಸಂಪೂರ್ಣ ಮಾಹಿತಿ ಕಲೆ ಹಾಕಿ ಸಮಗ್ರ ವರದಿಯನ್ನು ಡಿಡಿಪಿಐ ಅವರಿಗೆ ಸಲ್ಲಿಸಲಾಗಿತ್ತು. ಇದರ ಆಧಾರದಲ್ಲಿ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post