ಕಲ್ಪ ಮೀಡಿಯಾ ಹೌಸ್ | ಯಾದಗಿರಿ |
ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕರಾದ ರಾಜುಗೌಡ (ನರಸಿಂಹ ನಾಯಕ) ಅವರು ವಿದ್ಯಾರ್ಥಿಗಳ ಪಾಲಿನ ಆಶಾಕಿರಣ ಎಂದು ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷರಾದ ಗಿರೀಶ್ ಡಿ.ಆರ್. ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾಯಿ ತಿಮ್ಮಮ್ಮ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಹಾಗೂ ಬೆಂಗಳೂರಿನ ವಿಜಯನಗರದ ಪ್ರತಿಷ್ಠಿತ ಸಾಧನ ಕೋಚಿಂಗ್ ಸೆಂಟರ್ ಸಹಯೋಗದಲ್ಲಿ ಸುಮಾರು 500 ಜನ ವಿದ್ಯಾರ್ಥಿಗಳಿಗೆ ಹುಣಸಗಿ ಪಟ್ಟಣದ ನೀಲಕಂಠೇಶ್ವರ ಕಲ್ಯಾಣ ಮಂಟಪದಲ್ಲಿ ಆರು ತಿಂಗಳ ಅವಧಿಗೆ ಕೆಎಎಸ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಒದಗಿಸಿರುವುದು ಐತಿಹಾಸಿಕ ಕಾರ್ಯವಾಗಿದೆ. ಈ ಯೋಜನೆಯಿಂದಾಗಿ ಸರ್ಕಾರಿ ಸೇವೆಗಳಲ್ಲಿ ಸೇರಬೇಕೆಂಬ ಹಂಬಲವಿದ್ದ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಹೆಚ್ಚಿಸಿದಂತಾಗಿದೆ ಎಂದಿದ್ದಾರೆ.
ರಾಜ್ಯದ ಪ್ರತಿಷ್ಠಿತ ತರಬೇತಿ ಕೇಂದ್ರಗಳಲ್ಲಿ ಒಂದಾಗಿರುವ ಡಾ.ಜ್ಯೋತಿ ಅವರ ಸಾರಥ್ಯದ ಬೆಂಗಳೂರಿನ ವಿಜಯನಗರದ ಸಾಧನಾ ತರಬೇತಿ ಕೇಂದ್ರದ ಗುಣಮಟ್ಟದ ತರಬೇತಿಯನ್ನು ಕಲ್ಯಾಣ ಕರ್ನಾಟಕದ ಹುಣಸಗಿ ಭಾಗದ ವಿದ್ಯಾರ್ಥಿಗಳಿಗೆ ಒದಗಿಸುವುದರ ಮೂಲಕ ಶಾಸಕರು ವಿದ್ಯಾರ್ಥಿ ಪರ ಕಾಳಜಿಯನ್ನು ತೋರಿ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಗೆ ಕಾರಣೀಭೂತರಾಗಿದ್ದಾರೆ ಎಂದಿದ್ದಾರೆ.
ಶಾಸಕರ ಈ ಅಭೂತಪೂರ್ವ ಸಮಾಜಮುಖಿ ಕಾರ್ಯಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post