ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಅಧಿಕಾರಕ್ಕೇರುವ ಹಂತದಲ್ಲಿರುವ ಬಿಜೆಪಿಯಿಂದ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಬಹುತೇಕ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ಹಾಗೂ ಯಡಿಯೂರಪ್ಪ ಅವರ ಈ ಗೆಲುವಿಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, ನನ್ನ ಗೆಲುವಿಗೆ ಬೆನ್ನಿಗೆ ನಿಂತ ನಾಯಕ ಇಂದು ಮುಖ್ಯಮಂತ್ರಿ ಕುರ್ಚಿ ಅಲಂಕರಿಸುತ್ತಿದ್ದಾರೆ ಎಂಬುದು ಖುಷಿ ವಿಚಾರ ಎಂದಿದ್ದಾರೆ.
ತಮ್ಮ ಫೇಸ್’ಬುಕ್ ಪೇಜ್’ನಲ್ಲಿ ಬರೆದುಕೊಂಡಿರುವ ಸುಮಲತಾ ಅವರು, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Discussion about this post