ಕಲ್ಪ ಮೀಡಿಯಾ ಹೌಸ್ | ಯಲ್ಲಾಪುರ |
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೊಳಿಗದ್ದೆ (ಹುತ್ಕನ್ದ)ಯಲ್ಲಿ ಜನಪ್ರಿಯ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಿಸಲಾಯಿತು.
ಟ್ರಸ್ಟ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಮಹೇಶ್ ಭಟ್ ಮಾತನಾಡಿ, ಆನಂದದಾಯಕ ಜೀವನ ಸಾಗಿಸಲು ಶಿಕ್ಷಣ ಬಹಳ ಮಹತ್ವವಾಗಿರುವ ಕಾರಣ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಕಿವಿಮಾತು ಹೇಳಿದರು.
ಮಾಜಿ ಪಂಚಾಯತ್ ಅಧ್ಯಕ್ಷ ಅಪ್ಪು ಆಛಾರಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾರು, ಶಿಕ್ಷಕ ಬಳಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post