ಕಲ್ಪ ಮೀಡಿಯಾ ಹೌಸ್ | ಯಲ್ಲಾಪುರ |
ಕೃಷಿ ಮಾಡಿಕೊಂಡಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೇಲಂಗಾರ ಸಮೀಪದ ಕಿರಗಾರಿಮನೆ ಬಳಿ ಬುಧವಾರ ನಡೆದಿದೆ ನಡೆದಿದೆ.
ಕಿರಗಾರಿಮನೆಯ ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿಯಾಗಿದ್ದು, ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ನೊಂದಿದ್ದ ಎನ್ನಲಾಗಿದೆ. ಮನೆಯ ಸಮೀಪದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹವ್ಯಕ ಸಮುದಾಯದ ಯುವಕರಿಗೆ ಮದುವೆಗೆ ಕನ್ಯೆ ಸಿಗುವುದು ತುಂಬಾ ಕಷ್ಟವಾಗಿದೆ. ಕೃಷಿ ಮಾಡಿಕೊಂಡಿರುವ ಯುವಕರಿಗಂತೂ ಹೆಣ್ಣು ಕೊಡುವವರೇ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post