ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವಿಶ್ವಾಸಮತ ಕಳೆದುಕೊಂಡು ಪತನಗೊಂಡ ಬೆನ್ನಲ್ಲೇ, ಇತ್ತ ಅಧಿಕಾರಕ್ಕೇರುವ ಸಿದ್ದತೆಯಲ್ಲಿರುವ ಬಿಜೆಪಿಯಿಂದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಅಧಿಕೃತ ಮೂಲಗಳ ಪ್ರಕಾರ ಇಂದು ರಾತ್ರಿ ಅಥವಾ ನಾಳೆ ಮುಂಜಾನೆ ರಾಜ್ಯಪಾಲರನ್ನು ಭೇಟಿಯಾಗಲಿರುವ ಯಡಿಯೂರಪ್ಪ, ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ ಎನ್ನಲಾಗಿದೆ.
ಹಾಗೆಯೇ, ಗುರುವಾರ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.
Discussion about this post